ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಪ್ರೋ. ಪದ್ಮಾಶೇಖರ್ ಇವರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿರುತ್ತಾರೆ.

ಈ ಪ್ರಶಸ್ತಿಯನ್ನು ವಾರ್ಷಿಕ ಮಹಾರಥಯಾತ್ರಾ ಮಹೋತ್ಸವದ ಮುನ್ನಾ ದಿನವಾದ 21-03-2025ನೇ ಶುಕ್ರವಾರದಂದು ನಡೆಯುವ ಧಾರ್ಮಿಕ ಸಭೆಯಲ್ಲಿ ನೀಡಲಾಗುವುದು. ಇವರು ಕವಯತ್ರಿ, ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ, ದಕ್ಷ ಆಡಳಿತಗಾರ್ತಿ, ವಿಮರ್ಶಕಿ ಹಾಗೂ ಮಹಿಳಾಪರ ಹೋರಾಟಗಾರ್ತಿ ಆಗಿ ಬಹುಮುಖ ಸಾಧಕರಾಗಿದ್ದಾರೆ. ಗ್ರಂಥರಚನೆ, ಗ್ರಂಥ ಸಂಪಾದನೆ, ಉಪನ್ಯಾಸ, ಇನ್ನಿತರ ಕಾರ್ಯಗಳಲ್ಲಿ ವಿಶೇಷ ಅನುಭವ ಹೊಂದಿರುತ್ತಾರೆ.

ಎಂ.ಎ., ಪಿಎಚ್.ಡಿ. ಜೈನಾಲಜಿ ಸ್ನಾತಕೋತ್ತರ ಡಿಪ್ಲೋಮಾ ಶಾಸನಶಾಸ್ತç ಸ್ನಾತಕೋತ್ತರ ಡಿಪ್ಲೋಮಾದಲ್ಲಿ ಪ್ರಥಮ ರ‍್ಯಾಂಕ್ ಹಾಗೂ ಚಿನ್ನದ ಪದಕ ಪಡೆದ ಇವರು ಉನ್ನತ ಪದವೀದರರಾಗಿ ಮೈಸೂರು ಜೈನಶಾಸ್ತ ಮತ್ತು ಪ್ರಾಕೃತ ವಿಭಾಗ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿ ಅಲ್ಲಿಯೇ ಪ್ರಾಧ್ಯಾಪಕ ವಿಭಾಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಿವೃತ್ತಿಯ ನಂತರ ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಹಾಗೂ ಮೈಸೂರು ವಿ.ವಿ. ಪ್ರಾಕೃತ ಮತ್ತು ಜೈನ ಶಾಸ್ತç ಅಧ್ಯಯನ ವಿಭಾಗದ ವಿಭಾಗಾಧ್ಯಕ್ಷರಾಗಿ ನೇಮಕಗೊಂಡು ಸಮರ್ಥವಾಗಿ ಸೇವೆ ಸಲ್ಲಿಸಿರುತ್ತಾರೆ.

ಕನ್ನಡ, ಸಂಸ್ಕೃತ, ಇಂಗ್ಲೀಷ್, ಪ್ರಾಕೃತ ಭಾಷೆ ಮತ್ತು ಜೈನ ಸಾಹಿತ್ಯವನ್ನು ಕುರಿತಂತೆ ವಿಶೇಷವಾದ ಅಧ್ಯಯನ ಮತ್ತು ಅಧ್ಯಾಪನಾ ನಡೆಸಿ ಸಾಹಿತ್ಯ ಕೃಷಿ ವಿಮರ್ಶೆ, ಸಂಶೋಧನೆ, ಕಾವ್ಯ ಜೀವನ ಚರಿತ್ರೆ ಸೇರಿದಂತೆ ಬಹು ಸಾಹಿತ್ಯಿಕ ಪ್ರಕಾರಗಳಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಇವರ ಮುಂದಾಳತ್ವದಲ್ಲಿ ಸುಮಾರು 6000ಕ್ಕೂ ಹೆಚ್ಚು ಪ್ರಾಚೀನ ತಾಳಪತ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.

ಪಿಎಚ್.ಡಿ ಸಂಶೋಧಕರಿಗೆ ಮಾರ್ಗದರ್ಶಕರಾಗಿ ಜೈನ ಸಾಹಿತ್ಯ, ಕನ್ನಡ ಸಾಹಿತ್ಯ, ಜಾನಪದ ಸಾಹಿತ್ಯಕ್ಕೆ ವಿಶೇಷ ಕೊಡುಗೆಯನ್ನು ನೀಡಿದ ಇವರು ಹಲವಾರು ಪ್ರಬಂಧಗಳನ್ನು ಮಂಡಿಸಿದ್ದಾರೆ.

ಇವರ ಸಾಹಿತ್ಯ ಸೇವೆಗೆ ಹಲವಾರು ಪ್ರಶಸ್ತಿ ಪುರಸ್ಕಾರ, ಗೌರವಗಳು ಸಂದಿವೆ. ಅವುಗಳಲ್ಲಿ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ವಿಠಲಾನುಗ್ರಹ ಪ್ರಶಸ್ತಿ, ಚಾವುಂಡರಾಯ ಪ್ರಶಸ್ತಿ, ಆದರ್ಶ ಮಹಿಳಾ ರಾಷ್ಟಿçÃಯ ಪುರಸ್ಕಾರಗಳು ಸಂದಿವೆ. ಇತ್ತೀಚೆಗೆ 2024ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೂ ಸಹ ಇವರಿಗೆ ಲಭಿಸಿದೆ.

ಹೊಂಬುಜ ಜೈನ ಮಠದಿಂದ ನೀಡುವ ಸಿದ್ದಾಂತಕೀರ್ತಿ ಪ್ರಶಸ್ತಿಯು ರೂ. 51,000 ಗಳ ನಗದು ಮತ್ತು ಅಂಗವಸ್ತç ಸಹಿತ ನೀಡಿ ಗೌರವಿಸಲಾಗುವುದು. ಇದುವರೆಗೂ ಅನೇಕ ವಿದ್ವಾಂಸರಿಗೆ ಈ ಪ್ರಶಸ್ತಿಯನ್ನು ಸುಮಾರು 5 ದಶಕಗಳಿಂದ ಶ್ರೀಮಠದಿಂದ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

3 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

20 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

21 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

22 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago