POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ

GridArt 20250331 181400795.jpg

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ – ಮುನೀರ್ ಸಖಾಫ಼ಿ

ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು.

ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಕಳೆದ 29 ದಿನಗಳಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಭಾನುವಾರ ಕರಾವಳಿಯಲ್ಲಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ  ಇಂದು ಸಡಗರ ಹಾಗೂ ಸಂಭ್ರಮದಿಂದ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರ ಯಾದಿಯಾಗಿ ಭಕ್ತಿಪೂರ್ವಕವಾಗಿ ಈದ್ಗಾ ಮೈದಾನದಲ್ಲಿ ನಮಾಜ್ ಮಾಡಿ ಪರಸ್ಪರ ಶುಭಕೋರಿ ರಂಜಾನ್ ಹಬ್ಬವನ್ನು ಆಚರಣೆ ಮಾಡಿದರು.

ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ನಂತರದಲ್ಲಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫಿ ಮಾತನಾಡಿ, ಪೈಗಂಬರ್ ಜೀವನ ಸಂದೇಶವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರಿಂದ ಜೀವನ ಸಾರ್ಥಕವಾಗುವುದು ಎಲ್ಲ ಧರ್ಮದ ಸಾರವುದು ಒಂದೇ ಅಗಿದೆ ಭಾರತ ದೇಶ ವಿವಿಧತೆಯಲ್ಲಿ ಏಕತೆಯ ದೇಶವಾಗಿದೆ ಯಾವುದೇ ಜಾತಿ ಭಾವನೆ ತೋರದೆ ಸರ್ವ ಧರ್ಮದ ಭಾವೈಕ್ಯತೆಯ ದೇಶವಾಗಿದೆ .

ಭಾರತ ದೇಶದಲ್ಲಿ ಹಲವಾರು ಧರ್ಮ ಜಾತಿ ಪಂಗಡಗಳಿವೆ ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕಿದೆ ಇದನ್ನು ಸಂವಿಧಾನದ ಅಡಿಯಲ್ಲಿ ಉಪಯೋಗಿಸಿಕೊಂಡು ಪರಸ್ಪರ ಸಾಮರಸ್ಯವನ್ನು, ಸಹಿಷ್ಣುತೆಯನ್ನು ಅಳವಡಿಸಿಕೊಂಡು ಪ್ರೀತಿ ಗೌರವದೊಂದಿಗೆ ಬಾಳಬೇಕಾಗಿದೆ. ಯಾವುದೇ ಧರ್ಮಗಳನ್ನಾಗಲಿ ಪಂಗಡಗಳನ್ನಾಗಲಿ ಜಾತಿಯವರನ್ನಾಗಲಿ ಹೀಯಾಳಿಸುವ ಅಧಿಕಾರ ಇಸ್ಲಾಂ ಧರ್ಮ ಕೊಡಲಿಲ್ಲ.ಯಾವುದೇ ಧರ್ಮದ ಅಥವಾ ಪಂಗಡದ ಒಬ್ಬ ವ್ಯಕ್ತಿಯನ್ನು ಅನ್ಯಾಯವಾಗಿ ಕೊಂದರೆ ಇಡೀ ಜನ ಸಮೂಹವನ್ನೇ ಕೊಲೆ ಮಾಡಿದ ಶಿಕ್ಷೆಯನ್ನು ಆತನಿಗೆ ಅಲ್ಲಾಹು ನೀಡುತ್ತಾನೆ ಎಂದು ಬೋಧಿಸುವ ಧರ್ಮವಾಗಿದೆ ಇಸ್ಲಾಂ ಎಂದು ಹೇಳಿದರು.

ಧರ್ಮ ಧರ್ಮಗಳ ನಡುವಿನ ಸಂಘರ್ಷಗಳನ್ನು ಬದಿಗೊತ್ತಿ ಭಾವೆಕ್ಯತೆ, ಸಹೋದರತ್ವ, ಭ್ರಾತೃತ್ವದಿಂದ ಬದುಕೋಣ ಎಂದು ಈ ಸಂದರ್ಭದಲ್ಲಿ ಕರೆ ನೀಡಿದರು.

ಈ ಸಂಧರ್ಭದಲ್ಲಿ ಜುಮ್ಮಾ ಮಸೀದಿ ಅಧ್ಯಕ್ಷರಾದ ಹಸನಬ್ಬ ಬ್ಯಾರಿ ,ಕಾರ್ಯದರ್ಶಿ ಶೇಖಬ್ಬ ಮೆಕ್ಕಾ ಮಸ್ಜಿದ್ ಅಧ್ಯಕ್ಷರಾದ ಅಮೀರ್ ,ಕಾರ್ಯದರ್ಶಿ ಜಾಕೀರ್ ಮುಖಂಡರಾದ ಅರ್ ಎ ಚಾಬುಸಾಬ್,ಅಮೀರ್ ಹಂಜಾ ಗ್ರಾಪಂ ಸದಸ್ಯ ಆಸೀಫ಼್ ಭಾಷಾ, ಆರ್ ಎಸ್ ಶಂಶುದ್ದೀನ್, ಭಾಪುಖಾನ್ , ನಾಸೀರ್ ,ನದೀಮ್  , ರೆಹಮಾನ್ ಚಾಲಿ  ಹಾಗೂ ಇನ್ನಿತರರಿದ್ದರು. 

ಶಿವಮೊಗ್ಗ ಜಿಲ್ಲಾದ್ಯಂತ ಸಂಭ್ರಮದ ರಂಜಾನ್ ಆಚರಣೆ

ಶಿವಮೊಗ್ಗ : ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಮತ್ತು ನಗರದಲ್ಲಿ ಸಡಗರದ ರಂಜಾನ್ ಹಬ್ಬವನ್ನು ಆಚರಿಸಿದರು.

ಪವಿತ್ರ ರಂಜಾನ್ ಹಬ್ಬವನ್ನ ಮುಸ್ಲೀಂ ಸಮುದಾಯದಿಂದ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈದ್ಗಾ, ಹಾಗೂ ಇತರೆ ಪ್ರಾರ್ತನಾ ಮಂದಿರಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಆಚರಣೆ ನಡೆದಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.ನಂತರ ಪರಸ್ಪರ ತಬ್ಬಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನ ಕೋರಿದರು. ಬೆಳಿಗ್ಗೆ 9 ಗಂಟೆಗೆ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಆರಂಭವಾಗಿದೆ. ಸುಮಾರು 30 ನಿಮಿಷ ಪ್ರಾರ್ಥನೆ ಸಲ್ಲಿಸಿದರು.

ರಂಜಾನ್ ಹಬ್ಬಕ್ಕೆ ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಪಕ್ಷದ ಎಲ್ಲಾ ರಾಜಕೀಯ ಮುಖಂಡರುಗಳು ಶುಭಾಶಯ ಕೋರಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.