ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ
ರಿಪ್ಪನ್ ಪೇಟೆ : ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪಟ್ಟಣದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಶಿವಮೊಗ್ಗ, ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜು ಇಲ್ಲಿ ದಿನಾಂಕ 20.03.2025ರಂದು ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಜಾನಪದ ಸಮೂಹ ನೃತ್ಯ, ಜಾನಪದ ಸಮೂಹ ಗಾಯನ, ರಸಪ್ರಶ್ನೆ ಮತ್ತು ಭಾವಗೀತೆ ಸ್ಪರ್ಧೆಗಳನ್ನು ಸಾಂಸ್ಕೃತಿಕ ವೇದಿಕೆಯವತಿಯಿಂದ “ಸ್ಪರ್ಧಾ ಸಂಗಮ 2025” ಎಂಬ ಶೀರ್ಷಿಕೆಯ ಅಡಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸ್ಪರ್ಧೆಗಳಲ್ಲಿ ಕುವೆಂಪು ವಿಶ್ವವಿದ್ಯಾಲಯ ಮಟ್ಟದ 20 ರಿಂದ 25 ಕಾಲೇಜುಗಳಿಂದ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು ಮತ್ತು ಈ ಸ್ಪರ್ಧೆಗಳಲ್ಲಿ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿನಿಯರಾದ ಕು. ಮೇಘನಾ ಎಸ್, ಕು. ನಾಗಶ್ರೀ ಜಿ, ಕು. ಅನುಪಮಾ ಎಂ, ಕು. ಕಾವ್ಯ, ಕು.ಧನ್ಯ ಮತ್ತು ಪ್ರಥಮ ಬಿಕಾಂ ವಿದ್ಯಾರ್ಥಿನಿ ಕು. ಸ್ವಾತಿ ಇವರು ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಹೆಚ್.ಎಸ್. ವಿರೂಪಾಕ್ಷಪ್ಪ ತಿಳಿಸಿದ್ದಾರೆ.
ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಕ್ಕಾಗಿ ವಿದ್ಯಾರ್ಥಿನಿಯರಿಗೆ ಹಾಗೂ ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ಡಾ. ಟಿ ವಿದ್ಯಾ ಪವಾರ್ ಇವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಎಲ್ಲಾ ಬೋಧಕ ಹಾಗೂ ಆಡಳಿತ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ ವೃಂದದವರಿಂದ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಲಾಯಿತು.