RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು, ಯುಗಾದಿ ಅಮಾವಾಸ್ಯೆ ಅಂಗವಾಗಿ ಸಾರ್ವಜನಿಕರು ಕುಟುಂಬದವರೊಂದಿಗೆ ಸ್ಥಳೀಯ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಹಬ್ಬದ ಪ್ರಯುಕ್ತ ಮನೆಗಳಲ್ಲಿ ವಿಶೇಷ ಸಿಹಿ ಅಡುಗೆಯನ್ನೂ ತಯಾರಿಸಲಾಗುತ್ತಿದೆ.ಹಿಂದೂಗಳ ಧಾರ್ಮಿಕ ನಂಬಿಕೆ ಪ್ರಕಾರ ಯುಗಾದಿಯು ವರ್ಷದ ಮೊದಲ ಹಬ್ಬವಾಗಿದೆ. ಹೀಗಾಗಿ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುವುದು ವಾಡಿಕೆ. ಭಾನುವಾರ ಹಬ್ಬ ಆಚರಿಸಲು ಶನಿವಾರವೇ ವಿವಿಧ ಸಾಮಗ್ರಿಗಳ ಖರೀದಿಯಲ್ಲಿ ಸಾರ್ವಜನಿಕರು ತೊಡಗಿದ್ದರು. ಹಣ್ಣುಗಳು ಹಾಗೂ ತರಕಾರಿಗೂ ಬೇಡಿಕೆ ಹೆಚ್ಚಾಗಿತ್ತು.

ಯುಗಾದಿ ಹಬ್ಬದ ಅಂಗವಾಗಿ ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಇಂದು ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಹೊಸವರ್ಷದ ಧ್ವಜಾರೋಹಣ ಕಾರ್ಯಕ್ರಮವನ್ನು ದೇವಸ್ಥನಾದ ವ್ಯವಸ್ಥಾಪನ ಸಮಿತಿ ಸದಸ್ಯ ಗಣೇಶ್ ಕಾಮತ್ ನೆರವೇರಿಸಿದರು

ನಂತರ ಮಾತನಾಡಿದ ಗಣೇಶ್ ಕಾಮತ್ ವಿಶ್ವದ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಭಾರತವು ಸಹ ಮುಂಚೂಣಿಯಲ್ಲಿದ್ದು ಇಲ್ಲಿನ ಜನತೆ  ಸ್ವಧರ್ಮದಲ್ಲಿ ನಿಷ್ಠೆ ಪರಧರ್ಮ ದಲ್ಲಿ ಸಹಿಷ್ಣುತಾಭಾವವನ್ನು ಹೊಂದಿದ್ದಾರೆ. ಯುಗಾದಿ ಮತ್ತೆ ಬಂದಿದೆ. ಎಲ್ಲಾ ಕಡೆ ಮರ-ಗಿಡಗಳು ಚಿಗುರು ಕಂಡಿವೆ ಮಾವು-ಬೇವು ಕಂಗೊಳಿಸಿದೆ ಇದರಿಂದ ಜನರಲ್ಲಿ ಈಗ ಹಬ್ಬ ಆಚರಿಸುವ ಹುಮ್ಮಸ್ಸು ಬಂದಿದೆ.ಪ್ರಕೃತಿ ಎಂದು ನಮಗೆ ಕೈಕೊಟ್ಟಿಲ್ಲ ಈಗ ಯುಗಾದಿಯು ಪ್ರಕೃತಿದತ್ತವಾಗಿ ಬಂದಿದೆ.ನಮ್ಮ ಹಿಂದಿನ ದಿನಗಳನ್ನು ಮರೆತು ಮುಂದಿನ ದಿನಗಳಲ್ಲಿ ಹೊಸ ಬದುಕನ್ನು ರೂಪಿಸಿಕೊಳ್ಳಬೇಕಾಗಿದೆ. ನಮ್ಮ ಹಿರಿಯರು ಈ ವಿಷಯದಲ್ಲಿ ಉತ್ತಮ ಮಾರ್ಗವನ್ನು ತೋರಿಸಿ ಕೊಟ್ಟು ಹೋಗಿದ್ದಾರೆ.  ನಮ್ಮ ಯುವಜನಾಂಗ ವಿಶ್ವಮಟ್ಟದಲ್ಲಿ ಇಡೀ ಮನುಕುಲಕ್ಕೆ ಒಳಿತನ್ನು ಬಯಸುವ ನಾಯಕರಾಗಿ ರೂಪುಗೊಳ್ಳುವ  ಅವಕಾಶ ಲಭಿಸಿದೆ. ಯುಗಾದಿ ನಮ್ಮಲ್ಲಿ ವಿಶಾಲ ಮನೋಭಾವ ಬೆಳೆಸಿ ಮನುಷ್ಯ ಸಹಜ ಸಂಕುಚಿತ ಮನೋಭಾವವನ್ನು ತೊಡೆದುಹಾಕಲು ಸಹಕಾರಿಯಾಗಲಿ , ಯುಗಾದಿ ಹೊಸ ವರ್ಷದ ಶುಭ ಕೃತು ನಾಮ ಸಂವತ್ಸರವು ಸರ್ವರಿಗೂ ಶುಭವನ್ನು ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಸಿದ್ದಿವಿನಾಯಕ  ದೇವಸ್ಥಾನದ ಅಧ್ಯಕ್ಷ ಈಶ್ವರ್ ಶೆಟ್ಟಿ ,ಹಿಂದೂ ಮಹಾ ಸಭಾದ ರಾಮಚಂದ್ರ ಬಳೆಗಾರ್ , ಸುಧೀರ್ ಪಿ , ಎಂ. ಬಿ. ಮಂಜುನಾಥ್, ಸುರೇಶ್ ಸಿಂಗ್ , ಸುಧೀಂದ್ರ ಪೂಜಾರಿ,ವೈ. ಜೆ.ಕೃಷ್ಣ,ಭಾಸ್ಕರ ಶೆಟ್ಟಿ,ರಮೇಶ್ ಫ಼್ಯಾನ್ಸಿ, ಮುರುಳಿ ಕೆರೆಹಳ್ಳಿ, ಆರ್ ರಾಘವೇಂದ್ರ. ವಾಸು ಶೆಟ್ಟಿ. ಕಗ್ಲಿ ಲಿಂಗಪ್ಪ. ಮೈಕ್ ದಾನಪ್ಪ. ಮೆಡಿಕಲ್  ಸತೀಶ್. ನಾಗಭೂಷಣ್ , ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 hour ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

18 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

19 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

20 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago