ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು
ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ದನವೊಂದು ದಿಢೀರ್ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್ ವಾಹನ ಬ್ರೇಕ್ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ ಮತ್ತೊಂದು ಕಾರು ಸ್ವಾಮೀಜಿ ಇದ್ದ ಕಾರಿಗೆ ಅಪ್ಪಳಿಸಿದೆ. ಮೂರು ವಾಹನಗಳು ಜಖಂ ಆಗಿವೆ.
ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರು ಚಿಕ್ಕಮಗಳೂರಿನಿಂದ ಶಿರಸಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಶ್ರೀಗಳು ಮತ್ತು ಕಾರಿನಲ್ಲಿದ್ದ ಉಳಿದವರು ಪಾರಾಗಿದ್ದಾರೆ.
ಶ್ರೀಗಳು ಬದಲಿ ಕಾರಿನಲ್ಲಿ ಪ್ರಯಾಣ ಮುಂದುವರೆಸಿದರು ಎಂದು ತಿಳಿದು ಬಂದಿದೆ.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…