RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ

ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಬಾರ್ ಮಾಲೀಕರ ಬಳಿ ಸದಸ್ಯರ ಹೆಸರಿನಲ್ಲಿ ಹಣ ಪಡೆದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ನೀಡಿದರು.

ಪಟ್ಟಣದ ರಾಯಲ್ ಕಂಫರ್ಟ್ ಸಭಾಂಗಣದಲ್ಲಿ ನಡೆದ ಪತ್ರೀಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ನನ್ನ ಏಳಿಗೆಯನ್ನು ಸಹಿಸದ ಕೆಲವರು ನಾನು ಜಾಲುಕ್ಯ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ಬಳಿ ಹಣ ಪಡೆದಿದ್ದಾನೆ ಎಂದು ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸುಳ್ಳು ಆರೋಪ ಮಾಡುತಿದ್ದು ಈ ಆರೋಪಕ್ಕೆ ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದರು.

ನಾನು 1994 ರಿಂದ ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದು ಅಧಿಕಾರ ಇರಲಿ ಇಲ್ಲದೇ ಇರಲಿ ಜನಸೇವೆ ಮಾಡಿಕೊಂಡು ಜನರ ನಡುವೆ ಇದ್ದೇನೆ ನಾನು ಏನು ಎಂಬುವುದು ನನ್ನ ವಾರ್ಡ್ ನ ಜನರಿಗೆ ಗೊತ್ತು ಇನ್ನೂ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ನನ್ನನು ಹಣಿಯಲು ಪ್ರಯತ್ನಿಸುತಿದ್ದಾರೆ ಇದಕ್ಕೆಲ್ಲಾ ನಾನು ಬಗ್ಗುವುದಿಲ್ಲ ,ನಾನು ಪುಡಗೋಸಿಗಳಿಗೆಲ್ಲಾ ಬಗ್ಗುವ ಜಾಯಮಾನದವಲ್ಲ ,ಇನ್ನೂ ಈ ವಿಚಾರದ ಬಗ್ಗೆ ಆಣೆ ಪ್ರಮಾಣಕ್ಕೆ ನಾನು ಸಿದ್ದನಾಗಿದ್ದು ಮೊದಲು ಆರೋಪವನ್ನು ಸಾಬೀತುಪಡಿಸಲಿ ಎಂದು ಹೇಳಿ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದರು.

ಪತ್ರೀಕಾಗೋಷ್ಟಿಯಲ್ಲಿದ್ದ ಚಾಣಕ್ಯ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಾದ ಅಶ್ವತ್ ಗೌಡ ಮಾತನಾಡಿ ನಾವು ಗ್ರಾಪಂ ಸದಸ್ಯ ಸುಂದರೇಶ್ ರವರಿಗೆ ಹಣ ನೀಡಿದ್ದೇವೆ ಎನ್ನುವ ಆರೋಪ ಸತ್ಯಕ್ಕೆ ದೂರವಾದ ಸಂಗತಿಯಾಗಿದೆ.ಸುಂದರೇಶ್ ಹಾಗೂ ನಮ್ಮ ನಡುವೆ ಉತ್ತಮ ಸ್ನೇಹವಿದೆಯೇ ಹೊರತು ಯಾವುದೇ ವ್ಯವಹಾರಗಳಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು. ಕೆಲ ವರ್ಷಗಳ ಹಿಂದೆ  ನಾವು ಪಟ್ಟಣದಲ್ಲಿ ಕಾರ್ಯ ನಿರ್ವಹಿಸುತಿದ್ದ ಗವಿಸಿದ್ದೇಶ್ವರ ಬಾರ್ ಅನ್ನು ಕ್ರಯಕ್ಕೆ ಪಡೆದಾಗ ಸ್ವಲ್ಪ ಕಾನೂನು ತೊಡಕುಗಳುಂಟಾಗಿತ್ತು ಆ ಸಂಧರ್ಭದಲ್ಲಿ ಸ್ನೇಹಿತರಾದ ಸುಂದರೇಶ್ ನಮಗೆ ಸಹಾಯ ಮಾಡಿದ್ದಾರೆ , ಅವರ ರಾಜಕೀಯ ವಿರೋಧಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸುಮ್ಮ ಸುಮ್ಮನೇ ಆರೋಪ ಮಾಡುವುದು ತಪ್ಪು ಎಂದು ಹೇಳಿದರು.

ಮುಖಂಡರಾದ ರಾಮಚಂದ್ರ ಮಾತನಾಡಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತಿಯಲ್ಲಿ ಆಡಳಿತ ಪಕ್ಷದಲ್ಲಿರುವ ಕಾಂಗ್ರೆಸ್ ನವರು ನಡೆದುವ ಎಲ್ಲಾ ಭ್ರಷ್ಟಾಚಾರಗಳನ್ನು ಗಟ್ಟಿ ಧ್ವನಿಯಲ್ಲಿ ಪ್ರಶ್ನಿಸುವ ಸುಂದರೇಶ್ ರವರನ್ನು ಸುಳ್ಳು ಆರೋಪದ ಮೂಲಕ ಹಣಿಯಲು ಯತ್ನಿಸಿದ್ದಾರೆ ಆದರೆ ಅದಕ್ಕೆಲ್ಲಾ ಸುಂದರೇಶ್ ಬಗ್ಗುವುದಿಲ್ಲ ಎಂದರು.

ಈ ಸಂಧರ್ಭದಲ್ಲಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ , ಮುಖಂಡರಾದ ತುಳೋಜಿರಾವ್ , ದೇವರಾಜ್ ಕೆರೆಹಳ್ಳಿ ಹಾಗೂ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 hour ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

18 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

19 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

20 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago