ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ
ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು ಬೆಡ್ ರೂಮ್ ನಲ್ಲಿದ್ದ ಗಾಡ್ರೇಜ್ ಮುರಿದು 105000 (ಒಂದು ಲಕ್ಷದ ಐದು ಸಾವಿರ) ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಲಾಗಿತ್ತು, ಈ ಬಗ್ಗೆ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ಕೈಗೊಂಡ ರಿಪ್ಪನ್ ಪೇಟೆ ಪೊಲೀಸರು ಶಿವಮೊಗ್ಗ ನಿವಾಸಿಯಾದ ಅಬ್ದುಲ್ ಶಫೀಕ್ ,ಖಲೀಲ್ ಖಾನ್ ,ಸೈಯದ್ ಜಾವೀದ್ ರವರನ್ನು ಬಂಧಿಸಿ ಕಳವು ಮಾಡಿದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಉಮೇಶ್ , ಸಂತೋಷ್ ಕೊರವರ , ರಾಮಚಂದ್ರ ಹಾಗೂ ಮಧುಸೂಧನ್ ಇದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…