HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ
ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ ಹಾನಿಯಾಗಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪಟ್ಟಣದ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಮನೆ ಹಾಗೂ ಕಾಂಪೌಂಡ್ ಗೆ ಹಾನಿಯಾಗಿದ್ದು ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ , ಒಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಸುಟ್ಟುಹೋಗಿತ್ತು ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳ ಪರಿಶೀಲನೆ ನಡೆದಿದ್ದಾರೆ.
ಮಳೆಯಿಂದ ನೆಲಕ್ಕುರುಳಿರು ವಿದ್ಯುತ್ ಕಂಬ ಹಾಗೂ ವಿದ್ಯುತ್ ಟ್ರಾನ್ಸ್ ಫಾರ್ಮರ್ ನ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚಿಸಿದ್ದಾರೆ.
ಶಾಸಕ ಬೇಳೂರು ಗೋಪಾಲಕೃಷ್ಣ ಪೂರ್ವ ನಿಯೋಜಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳುತಿದ್ದು ಗುರುವಾರ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.