ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ
ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್ ಜಿ. ಇವರಿಗೆ ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು.
ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಆಧ್ಯಕ್ಷೆ ಧನಲಕ್ಷಿö್ಮ, ಕೆಂಚನಾಲ ಗ್ರಾಮ ಪಂಚಾಯಿತ್ ಆಧ್ಯಕ್ಷ ಉಬೇದುಲ್ಲಾ ಷರೀಫ್ ಮತ್ತು ಸಿಬ್ಬಂದಿ ವರ್ಗ ಸೇರಿದಂತೆ ಮಾದಾಪುರ ಕೊರಟಿಕೆರೆ ಇನ್ನಿತರ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಪಾಲ್ಗೊಂಡಿದ್ದರು.