ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!


ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ.
ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು ಗುರುತಿಸಲಾಗಿದ್ದು ಇವರು ಟೆಂಕ್ ಬೈಲು ನಿವಾಸಿಯಾಗಿದ್ದು ಡಿಸಿಸಿ ಬ್ಯಾಂಕ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


































Leave a Reply