January 11, 2026

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.

A woman has died in a head-on collision between two bikes.

ಸಾಗರ ತಾಲೂಕಿನ ಆನಂದಪುರ ಸಮೀಪದ ಬೊಮ್ಮತ್ತಿ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. 

ಅಬಸೆಯಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕಿಗೂ ಹಾಗೂ ಸಾಗರದಿಂದ ಬೆಳ0ದೂರು ಕಡೆ ತೆರಳುತ್ತಿದ್ದ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಬಸೆ ಗ್ರಾಮದ ನಾಗಮ್ಮ 75 ವರ್ಷ ಮೃತ ದುರ್ಧೈವಿಯಾಗಿದ್ದಾರೆ.ಇನ್ನೂ ಈ ಘಟನೆಯಲ್ಲಿ ಬೈಕ್ ಸವಾರರಿಗೂ ಹೆಚ್ಚಿನ ಗಾಯವಾಗಿದ್ದು ಆವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ನಾಗಮ್ಮನವರನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ.

ಘಟನೆ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *