ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ
ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ
ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಭದ್ರಾವತಿ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ರಾಜು ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಬೊಮ್ಮನಕಟ್ಟೆ ಗ್ರಾಮದ ಶ್ರೀನಿವಾಸ್ , ಕೋಡೂರು ಸಮೀಪದ ಸಿದ್ದಗಿರಿ ಗ್ರಾಮದ ನಿವಾಸಿ ಚರಣ್ (25) ಹಾಗೂ ಸಿದ್ದಗಿರಿ ಗ್ರಾಮದ ನಿವಾಸಿ ಪ್ರೀತಮ್ (15) ಗಂಭೀರ ಗಾಯಗಳಾಗಿವೆ.
ಶ್ರೀನಿವಾಸ್ ಗೆ ಎದೆ ಹಾಗೂ ತಲೆಗೆ ತೀವ್ರವಾದ ಗಾಯಗಳಾಗಿದ್ದು ಪ್ರೀತಮ್ ಗೆ ಕಾಲು ಮುರಿತವಾಗಿ , ಎದೆ ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರ ಪೆಟ್ಟಾಗಿದೆ. ಬೈಕ್ ಸವಾರ ಚರಣ್ ಗೂ ತಲೆ ಹಾಗೂ ಎದೆ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಶಾಂತಪುರ ಗ್ರಾಮದ ತಿರುವಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಘಟನೆಯಲ್ಲಿ ಭದ್ರಾವತಿ ಮೂಲದ ಮರ ಕಟಾವ್ ಮಾಡಲು ಬಂದಿದ್ದ ಕಾರ್ಮಿಕರು ಆನೆಗದ್ದೆ ಬಳಿ ಕ್ಯಾಂಪ್ ಹಾಕಿದ್ದರು ಜೇನಿಯಲ್ಲಿ ಕೆಲಸವುದೆ ಎಂದು ತೆರಳಿ ಹಿಂದಿರುಗುವಾಗ ಈ ಘಟನೆ ನಡೆದಿದೆ. ಕೋಡೂರು ಗ್ರಾಮದ ಸಿದ್ದಗಿರಿ ಗ್ರಾಮದ ಅಪ್ರಾಪ್ತ ಯುವಕ ಸೇರಿದಂತೆ ಇಬ್ಬರು ಯುವಕರಿಗೆ ಗಂಭೀರ ಗಾಯವಾಗಿದ್ದು ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗಕ್ಕೆ ರವಾನಿಸಲಾಗಿತ್ತು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗದ ಶವಾಗಾರದಲ್ಲಿ ರಾಜು ಮೃತದೇಹವನ್ನು ಇರಿಸಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…