ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ.
ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದು
ಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.