ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ
ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು.
ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು.
ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು ಹಿಡಿಯಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದರು. ಭಯದಿಂದಲೇ ಮುಟ್ಟುತ್ತ, ಗೂಳಿ ಜೊತೆಗೆ ಫೋಟೊ ತೆಗೆಸಿಕೊಳ್ಳುತ್ತ, ಡೊಳ್ಳು ಮತ್ತು ತಮಟೆ ವಾದ್ಯಗಳಿಗೆ ಹೆಜ್ಜೆ ಹಾಕಿದರು. ಇದೇ ವೇಳೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಡಿಜೆ ಹಾಡುಗಳಿಗೆ ರ್‍ಯಾಂಪ್ ವಾಕ್ ಮಾಡಿದರು.
ಬೇರೆ ರಾಜ್ಯಗಳ ಸಂಸ್ಕೃತಿ ಬಿಂಬಿಸುವ ಉಡುಗೆಗಳು, ಹಸಿರು ಶಾಲು ತೊಟ್ಟು ಪಂಚೆ ಉಟ್ಟ ವಿದ್ಯಾರ್ಥಿಗಳು ಗಮನ ಸೆಳೆದರು. ಬಿಸಿಲ ಧಗೆಗೆ ತಂಪಾರಿಸಿಕೊಳ್ಳಲು ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರು ಹೆಜ್ಜೆ ಹಾಕಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಮತಾ.ಪಿ.ಆರ್, ರಾಷ್ಟ್ರೀಯ ಪ್ರೌಢಶಾಲೆಯ ಶಿಕ್ಷಕಿ ಸುಜಾತ ಜಗದೀಶ್, ಎಂಕಾಂ ವಿಭಾಗದ ಉಪನ್ಯಾಸಕಿ ಕವಿತಾ ಕ್ರಾಸ್ಟಾ, ಕಮಲಾ ನೆಹರು ಕಾಲೇಜಿನ ಉಪನ್ಯಾಸಕಿ ಅನ್ನಪೂರ್ಣ, ಎನ್.ಎಸ್.ಎಸ್ ಮುಖ್ಯಸ್ಥ ಕೆ.ಎಂ.ನಾಗರಾಜ, ಐಕ್ಯೂಎಸಿ ಸಂಯೋಜಕ ಮಂಜುನಾಥ. ಎಸ್, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಪ್ರವೀಣ್.ಬಿ.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…