ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ

ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ

ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ

ರಿಪ್ಪನ್‌ಪೇಟೆ;-ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ನನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ ಗುಂಡು ಹಾರಿಸಿದ ಹುಬ್ಬಳ್ಳಿಯ ಪಿಎಸ್‌ಐ ಆನ್ನಪೂರ್ಣರವರ ಈ ದಿಟ್ಟತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೆಲ್ಯೂಟ್ ಎನ್ನುವ ಮೂಲಕ  ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶಂಸಿಸಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪುಟ್ಟ ಬಾಲಕಿಯ ಮೇಲೆ ಪೈಶಾಚಿಕ ಕೃತ್ಯ ಎಸಗಿ ಕೊಲೆ ಮಾಡುವ ಮೂಲಕ ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದ ದುರುಳನನ್ನು ಗುಂಡಿಕ್ಕಿದ ಮಹಿಳಾ ಪಿಎಸ್‌ಐ ಅನ್ನಪೂರ್ಣರವರ  ಗಟ್ಟಿತನಕ್ಕೆ ನನ್ನದೊಂದು ಸೆಲೂಟ್ ಎಂದು ಹೇಳಿ ಇಂತಹ ನೀಚ ಕೃತ್ಯ ಎಸಗುವವರಿಗೆ ಎಚ್ಚರಿಕೆಯ ಗಂಟೆಯನ್ನು ಸಹ ನೀಡಿದ್ದಾರೆ. ನಾನು ಈ ಹಿಂದಿನಿಂದಲೂ ತಪ್ಪು ಮಾಡಿದವರನ್ನು ಕೂಡಲೇ ಗಲ್ಲಿಗೇರಿಸಿ ಎಂದು ಹೇಳಿಕೊಂಡು ಬಂದವನು ಆದನ್ನು ಸಮರ್ಥವಾಗಿ  ನಿರ್ವಹಿಸಿದ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

28 ಕೋಟಿ ಅಭಿವೃದ್ದಿ ಕಾಮಾಗರಿ ಪ್ರಗತಿಯಲ್ಲಿದೆ;-

ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಡೆಹಳ್ಳಿಯಿಂದ-ರಿಪ್ಪನ್‌ಪೇಟೆ ಆರ್.ಎಂ.ಸಿ.ಯಾರ್ಡ್ವರಗೆ  ರಸ್ತೆ ಅಗಲೀಕರಣದೊಂದಿಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ 20 ಕೋಟಿ ರೂ ಅನುದಾನ ಬಿಡುಗಡೆಗೊಳಿಸಿ ಟೆಂಡರ್ ಮುಗಿದು ಕಾಮಗಾರಿ ಭರದಿಂದ ಸಾಗಿದ್ದು ಮೇ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರಿಗೆ ಮುಕ್ತಗೊಳ್ಳಲಿದೆ. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್ ಬಳಿಯಿಂದ ತೀರ್ಥಹಳ್ಳಿ ರಸ್ತೆಯ ಎರಡು ಕಿ.ಮೀ. ದ್ವಿ ಪಥ ರಸ್ತೆ ಕಾಮಗಾರಿಗೆ 5.35.ಕೋಟಿ ರೂ ವೆಚ್ಚದ ಬಾಕ್ಸ್ ಚರಂಡಿ ಮತ್ತು ಡಿವೈಂಡರ್ (ರಸ್ತೆ ವಿಭಜಕ) ನಿರ್ಮಾಣ ಮತ್ತು ರಸ್ತೆ ಆಗಲೀಕರಣದೊಂದಿಗೆ ಡಾಂಬರೀಕರಣ ಕಾಮಗಾರಿಯು ಪೂರ್ಣಗೊಂಡಿದೆ.ಇನ್ನೂ ವಿನಾಯಕ ವೃತ್ತದಲ್ಲಿ ಮತ್ತು ಹೊಸನಗರ ರಾಜ್ಯ ಹೆದ್ದಾರಿಯ ಒಂದು ಕಿ.ಮೀ.ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣಕ್ಕಾಗಿ 2.50 ಕೋಟಿ ರೂ ಸರ್ಕಾರದ ಅಭಿವೃದ್ದಿ ಅನುದಾನ ಬಿಡುಗಡೆಯಾಗಿದ್ದು ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದೆಂದು ವಿವರಿಸಿ ಈಗಾಗಲೇ ರಿಪ್ಪನ್‌ಪೇಟೆ ವ್ಯಾಪ್ತಿಗೆ 28 ಕೋಟಿ ರೂ ಸರ್ಕಾರದ ಆಭಿವೃದ್ದಿ ಅನುದಾನವನ್ನು ತರುವ ಮೂಲಕ ಕಾಮಗಾರಿಗಳು ಪೂರ್ಣ ಹಂತ ತಲುಪಿವೆ ಎಂದರು.

ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂಬ ಬಿಜೆಪಿಯ ಆರೋಪಕ್ಕೆ ಉತ್ತರಿಸಿದ ಅವರು ಈ ಹಿಂದೆ ಕುಕ್ಕಳಲೇ-ನೇರಲಮನೆ- ಗವಟೂರು-ವಡಗೆರೆ ಸಂಪರ್ಕ ರಸ್ತೆ ಡಾಂಬರೀಕರಣ ಕಾಮಗಾರಿ ಸಂಪೂರ್ಣ ಕಳಪೆಯಾಗಿ ಚಾಪೆ ಸುತ್ತುವಂತಾಗಿತು.ಅದನ್ನು ನಾವು ವಿರೋದಿಸಿದಾಗ ಅಗಿನ ಶಾಸಕರು ಏನು ಹೇಳಿ ಸಮರ್ಥಿಸಿಕೊಂಡಿದ್ದರು. ಈಗ ಸಾಗರ ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ತಲಾ ಎರಡು ಕಿ.ಮೀ. ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿರುವ ಬಿಜೆಪಿ ಪಕ್ಷದವರಿಗೆ ಸವಾಲು ಹಾಕುವ ಮೂಲಕ ನಾನೇ ಗುದ್ದಲಿ ಪಿಕಾಶಿ ಹಿಡಿದು ಆಗದು ತೋರಿಸುತ್ತೇನೆ ಕಳಪೆಯಾದರೆ  ಗುತ್ತಿಗೆದಾರನಿಂದಲೇ ಪುನ: ಕಾಮಗಾರಿ ಮಾಡಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಆಧ್ಯಕ್ಷ ಹೆಚ್.ವಿ.ಈಶ್ಚರಪ್ಪಗೌಡ,  ಗ್ರಾಮ ಪಂಚಾಯಿತ್ ಸದಸ್ಯರಾದ ಡಿ.ಈ.ಮಧುಸೂದನ್,ಎನ್.ಚಂದ್ರೇಶ್,ಆಶೀಫ್‌ಭಾಷಾ, ನಿರೂಫ್ ಕುಮಾರ್, ಪ್ರಕಾಶಪಾಲೇಕರ್,ಮುಖಂಡರಾದ ಉಮಾಕರ್, ರವೀಂದ್ರಕೆರೆಹಳ್ಳಿ, ಪರಮೇಶ್ ಎಂ ಎಂ, ರಮೇಶ ಪ್ಯಾನ್ಸಿ, ಪಿಯೂಸ್ ರೋಡ್ರಿಗಸ್, ಸಣ್ಣಕ್ಕಿ ಮಂಜು, ಶಿವಪ್ಪ ವಡಾಹೊಸಳ್ಳಿ, ಹೆಚ್.ಎನ್.ಉಮೇಶ್, ಮುಸ್ತಾಫ್,ವಿಜಯ ಮಳವಳ್ಳಿ, ಇನ್ನಿತರ ಕಾಂಗ್ರೆಸ್ ಪಕ್ಷದ ಮುಖಂಡರು   ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

19 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

20 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

21 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago