POSTMAN NEWS

ನೈಜ ಸುದ್ದಿ ನೇರ ಬಿತ್ತರ..

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ

GridArt 20250423 162157745.jpg

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಶಾಂತಪುರ ಗ್ರಾಮದ ತಿರುವಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಘಟನೆಯಲ್ಲಿ ಭದ್ರಾವತಿ ಮೂಲದ ಮರಕೆಲಸ ಮಾಡುವ ಇಬ್ಬರು ಹಾಗೂ ಕೋಡೂರು ಗ್ರಾಮದ ಸಿದ್ದಗಿರಿ ಗ್ರಾಮದ ಇಬ್ಬರು ಯುವಕರಿಗೆ ಗಂಭೀರ ಗಾಯವಾಗಿರುವ ಬಗ್ಗೆ ವರದಿಯಾಗಿದೆ.

ಭದ್ರಾವತಿ ಬೊಮ್ಮನಕಟ್ಟೆ ಮೂಲದ ರಾಜು ಎಂಬಾತನ ಪರಿಸ್ಥಿತಿ ಗಂಭೀರವಾಗಿದ್ದು ಇನ್ನುಳಿದ ಶ್ರೀನಿವಾಸ್ ಎಂಬಾತ ಕಾಲು‌ ಮುರಿತವಾಗಿದೆ. ಮತ್ತೊಂದು ಬೈಕ್‌ನಲ್ಲಿದ್ದ ಸಿದ್ದಗಿರಿ ಮೂಲದ ಯುವಕರಿಗೆ ತಲೆಗೆ ಗಂಭೀರ ಪೆಟ್ಟಾಗಿದೆ.

ಗಾಯಾಳುಗಳಿಗೆ ರಿಪ್ಪನ್ ಪೇಟೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.