RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹೊಸನಗರ ತಾಲ್ಲೂಕು ಬಿಜೆಪಿ ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ವತಿಯಿಂದ ನಡೆಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕ್ರಮ ಖಂಡನೀಯವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಬೆಲೆ ಏರಿಕೆ ಆರಂಭಮಾಡಿದೆ. ರಾಜ್ಯ ಸರ್ಕಾರ ಇದೀಗ ಹಾಲಿನ ದರವನ್ನು ಎರಡು ವರ್ಷದಲ್ಲಿ 9 ರೂ. ಹೆಚ್ಚಳ ಮಾಡಿದೆ ಇದರಿಂದ ಮಧ್ಯಮ ವರ್ಗ ಮತ್ತು ಬಡವರು ಬದುಕುವುದೇ ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರ ಹೆಚ್ಚಳ ಮಾಡಿರುವ ಅಗತ್ಯ ವಸ್ತುಗಳ ದರವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್.ಸತೀಶ್, ಎನ್.ಆರ್.ದೇವಾನಂದ, ಬೆಳಗೋಡು ಗಣಪತಿ , ಆರ್ ಟಿ ಗೋಪಾಲ್ ,ಎಂ ಬಿ‌ ಮಂಜುನಾಥ್ , ಸುಂದರೇಶ್ ಕೆರೆಹಳ್ಳಿ , ಸುರೇಶ್ ಸಿಂಗ್ ,ದೇವರಾಜ್ ಕೆರೆಹಳ್ಳಿ , ಲೀಲಾ ಶಂಕರ್ ಹಾಗೂ ಇನ್ನಿತರ ಪಕ್ಷದ ಮುಖಂಡರು ಸೇರಿದಂತೆ ಪ್ರತಿಭಟನೆಯಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ರಿಪ್ಪನ್‌ಪೇಟೆ-ಹುಂಚ ಹೋಬಳಿ ವ್ಯಾಪ್ತಿಯ ನೂರಾರು ಕಾರ್ಯಕರ್ತರು ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟು ವಿನಾಯಕ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿ ನಾಡಕಛೇರಿಯ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *