ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?
ಭದ್ರಾವತಿ :: ಇಲ್ಲಿನ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈತನ ಮೇಲೆ ಐದು ಪ್ರಕರಣಗಳಿವೆ.ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ಸುಮಾರು 1.4 ಕೆಜಿ ಗಾಂಜಾ ಇಟ್ಟುಕೊಂಡಿದ್ದ ಖಚಿತ ಮಾಹಿತಿ ಮೇರೆಗೆ ನಾಲ್ಕು ಆರೋಪಿಗಳನ್ನು ಬಂಧಿಸಿದ್ದರು.
ಇದರಲ್ಲಿ ನಸ್ರು ಎನ್ನುವ ಆರೋಪಿ ತಪ್ಪಿಸಿಕೊಂಡಿದ್ದ. ಇಂದು ಬೆಳಿಗ್ಗೆ ಪಿಎಸ್ಐ ಚಂದ್ರಶೇಖರ್ ಮತ್ತು ತಂಡ ಅವನನ್ನು ಹಿಡಿಯಲು ಹೋದಾಗ, ಅವನು ಪಿಎಸ್ಐ ಮತ್ತು ಸಿಬ್ಬಂದಿಯ ಮೇಲೆ ಕಂಟ್ರಿ ಪಿಸ್ತೂಲ್ ಮತ್ತು ಚಾಕುಗಳಿಂದ ದಾಳಿ ಮಾಡಲು ಪ್ರಯತ್ನಿಸಿದ್ದು. ಆಗ ಅನಿವಾರ್ಯವಾಗಿ ಆತನ ಕಾಲಿಗೆ ಪಿಎಸ್ಐ ಚಂದ್ರಶೇಖರ್ ಗುಂಡು ಹಾರಿಸಿದ್ದಾರೆ.ಬಂಧಿತ ಆರೋಪಿ ನಸ್ರುನಿಂದ ಒಂದು ಕಂಟ್ರಿ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್