ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!!
ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರವಾಗಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಂದಾದ್ರಿ ಬೆಟ್ಟದ ಮೇಲಿನ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯಲ್ಲಿ ದೇಹವೊಂದು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಸೋಮವಾರ ರಾತ್ರಿ ಟ್ರಕ್ಕಿಂಗ್ ತೆರಳಿದ್ದ ತಂಡವೊಂದು ಸುಟ್ಟ ಸ್ಥಿತಿಯಲ್ಲಿ ಇದ್ದ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗುಂಬೆ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ.
ಕುಂದಾದ್ರಿ ಬೆಟ್ಟದ ಮೇಲೆ ಅನೈತಿಕ ಚಟುವಟಿಕೆ, ಅಕ್ರಮ ವ್ಯವಹಾರ, ಇಸ್ಪೀಟು, ದಂಧೆ ಮುಂತಾದವು ನಡೆಯುತ್ತಿರುತ್ತದೆ ಎಂದು ಹಲವು ಬಾರಿ ಸ್ಥಳೀಯರಿಂದ ಹಾಗೂ ಮಾಧ್ಯಮಗಳಲ್ಲಿ ವರದಿ ಆಗಿತ್ತು. ಇದೀಗ ದೇಹವನ್ನು ಸುಟ್ಟು ಹಾಕಲಾಗಿದ್ದು ಈ ಪ್ರಕರಣ ಮೂರರಿಂದ ನಾಲ್ಕು ದಿನಗಳ ಹಿಂದೆ ನಡೆದಿರಬಹುದು ಎಂದು ಅಂದಾಜಿಸಲಾಗುತ್ತಿದೆ.
ಆಗುಂಬೆ ಪೊಲೀಸರಿಂದ ತನಿಖೆ ನಡೆಯುತ್ತಿದ್ದು ಇನ್ನಷ್ಟು ಮಾಹಿತಿ ಹೊರಬರಬೇಕಿದೆ.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…