ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು 2 ಕೋಟಿ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ.
ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ.
ಕೂಡಲೇ ಅವರನ್ನು ವಾಟ್ಸ್‌ಆಯಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದ ವೈದ್ಯರಿಗೆ 65 ಸಾವಿರ ರೂ. ಲಾಭಾಂಶ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನಂತರ 1.5 ಕೋಟಿ ರೂ. ಹೂಡಿಕೆ ಮಾಡಿದರೆ 25 ಕೋಟಿ ರೂ. ಲಾಭ ಗಳಿಸಬಹುದು ಎಂದು ನಂಬಿಸಿದ್ದರು. ಇಷ್ಟು ಹಣವಿರದ ಹಿನ್ನೆಲೆ ವೈದ್ಯರು ತಮ್ಮ ಇಬ್ಬರು ಸ್ನೇಹಿತರಿಂದ ಹಣ ಹೂಡಿಕೆ ಮಾಡಿಸಿದ್ದರು. ಲಾಭದಲ್ಲಿ ಮೂವರು ಹಂಚಿ ಕೊಳ್ಳುವ ಕುರಿತು ಮಾತನಾಡಿಕೊಂಡಿದ್ದರು. 1.50 ಕೋಟಿ ರೂ. ಹೂಡಿಕೆ ಮತ್ತು ತೆರಿಗೆ ಹಣವನ್ನು ಪಾವತಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹೂಡಿಕೆ ಮತ್ತು ಲಾಭಾಂಶದ ಕುರಿತು ವಿಚಾರಿಸಲು ಕರೆ ಮಾಡಿದಾಗ ವಂಚನೆಗೊಳಗಾಗಿದ್ದು ಅರಿವಿಗೆ ಬಂದಿದೆ. ಈ ಹಿನ್ನೆಲೆ 2.19 ಕೋಟಿ ರೂ. ವಂಚನೆಯಾಗಿದೆ ಎಂದು ಆರೋಪಿಸಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…