ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್

ಶಿವಮೊಗ್ಗ :- ಇಂದಿನ ಸನ್ನಿವೇಶದಲ್ಲಿ ಮಹಿಳೆಯರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸು ತ್ತಿದ್ದಾರೆ ಮತ್ತು ಅದರಲ್ಲಿಯೂ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಗಳಿದ್ದಾಗ ಬಹುಪಾಲು ಮಹಿಳೆಯರು ಯಾರೊಂದಿಗೂ ಇದರ ಬಗ್ಗೆ ಚರ್ಚಿಸಲು ಹಿಂಜರಿಯುತ್ತಾರೆ. ಆದ್ದರಿಂದ ಈ ಸಂಕೋಚ ಭಾವನೆಯಿಂದ ಹೊರಬಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನಗರದ ಖ್ಯಾತ ಪ್ರಸೂತಿ ತಜ್ಣೆ  ಡಾ|! ರಕ್ಷಾ ರಾವ್ ತಿಳಿಸಿದರು.

ಕಟೀಲ್‌ಅಶೋಕ್ ಪೈ ಸ್ಮಾರಕ ಕಾಲೇಜು, ಮಾನಸಟ್ರಸ್ಟ್, ಫ್ಯಾಮಿಲಿ ಪ್ಲಾನಿಂಗ್ ಅಸೋಸಿ ಯೇಷನ್ ಆಫ್‌ಇಂಡಿಯಾ ಶಿವಮೊಗ್ಗ, ಕಾಲೇಜಿನ ಸಮಾಜ ಕಾರ್ಯ ವಿಭಾಗ, ಯುವರೆಡ್ ಕ್ರಾಸ್ ಘಟಕ ಹಾಗೂ ಐ ಕ್ಯೂ ಎಸಿ ವಿಭಾಗದ ಸಹಯೋ ಗದಲ್ಲಿ ಮಹಿಳೆಯರಿಗಾಗಿ ಆಯೋಜಿಸಿದ್ದ ಸಖಿ ಆರೋಗ್ಯ ಹೆಣ್ಣು ಮಕ್ಕಳ ಆರೋಗ್ಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾವು ನಮ್ಮ ದೇಹವನ್ನು ಗೌರವಿಸಬೇಕು, ನಮ್ಮದೇಹದಲ್ಲಿ ಆಗುವ ಬದಲಾವಣೆಗಳು ಏಕೆ ಸಂಭವಿಸುತ್ತಿವೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ತಿಳುವಳಿಕೆಯ ಕೊರತೆಯಿದ್ದರೆ ಕೆಲವು ಅಭ್ಯಾಸ ಗಳನ್ನು ಕುರುಡಾಗಿ ಅನುಸರಿಸುತ್ತೇವೆ ಮತ್ತು ಆ ತಪ್ಪು ಕಲ್ಪನೆಗಳನ್ನು ನಂಬುತ್ತೇವೆ. ಯುವತಿಯರಿಗೆ ಮುಟ್ಟಿನ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ  ಅರಿವು ಅತ್ಯಂತ ಅವಶ್ಯಕ ವಾಗಿದೆ ಎಂದರು.

ಮುಟ್ಟಿನ ನೈರ್ಮಲ್ಯ, ಮುಟ್ಟಿನ ಚಕ್ರ ಮತ್ತು ಅದರ ಪ್ರಕ್ರಿಯೆ, ಮುಟ್ಟಿನ ಸಮಯದಲ್ಲಿ ಉಂಟಾಗುವ ಸಮಸ್ಯೆಗಳು, ಮುಟ್ಟಿನಕಿಟ್ ಬ್ಯಾಗ್ ಅಲ್ಲಿ ಇಡಬೇಕಾದ ಅಗತ್ಯ ವಸ್ತುಗಳು, ಆರೋಗ್ಯಕರವಾಗಿ ಮುಟ್ಟಿನ ಚಕ್ರವನ್ನು ನಿರ್ವಹಿಸುವ ವಿಧಾನ ಗಳು. ಪಿಸಿಓಡಿ ಸಮಸ್ಯೆ, ಗರ್ಭಕೋಶದ ಕ್ಯಾನ್ಸರ್, ದೇಹದ ಬೊಜ್ಜು ಮತ್ತು ಮಹಿಳೆಯರು ತಮ್ಮನ್ನು ತಾವು ಆರೋಗ್ಯವಾಗಿಡಲು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ವಿವರಿಸಿದರು.

ಎಫ್‌ಪಿಎಐ ಅಧ್ಯಕ್ಷ ಡಾ.ಆರ್ ಪಿ ಸಾತ್ವಿಕ್, ಪ್ರಾಂಶುಪಾಲೆ ಡಾ. ಸಂಧ್ಯಾಕಾವೇರಿ ಮಾತನಾಡಿದರು. ಉಪನ್ಯಾಸಕಿ ನಾನ್ಸಿ ಲವೀನಾ ಪಿಂಟೋ ಮತ್ತುಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜ್ಯೋತಿ ಸ್ವಾಗತಿಸಿ, ಪೂರ್ಣಿಮಾ ವಂದಿಸಿದರು. ಮಂಜುಳ ನಿರೂಪಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago