RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು

Fight between two members in Gram Panchayat General Meeting – Complaint and counter-complaint filed

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು

ರಿಪ್ಪನ್ ಪೇಟೆ : ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು ಎನ್ನಲಾಗುತಿದ್ದು ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ಪಟ್ಟಣದ ಗ್ರಾಪಂ ಬರುವೆ 3 ನೇ ವಾರ್ಡ್ ಸದಸ್ಯರಾದ ನಿರೂಪ್ ಕುಮಾರ್ ಹಾಗೂ ಗವಟೂರು 1 ನೇ ವಾರ್ಡ್ ನ ಸದಸ್ಯರಾದ ಸುಂದರೇಶ್ ಕೆರೆಹಳ್ಳಿ ನಡುವೆ ಮಂಗಳವಾರ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ಼್ ಐಆರ್ ದಾಖಲಾಗಿದೆ.

ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸಲ್ಲಿಸಿರುವ ದೂರಿನಲ್ಲೇನಿದೆ..!!?

ರಿಪ್ಪನ್ ಪೇಟೆ ಗ್ರಾಮ ಪಂಚಾಯತಿಯಲ್ಲಿ ನಾನು ಸದಸ್ಯನಾಗಿದ್ದು, ಈ ದಿನ ನಡೆದ ಸಾಮಾನ್ಯ ಸಭೆಯಲ್ಲಿ
ಪಾಲ್ಗೊಂಡಿದ್ದು, ಸದರಿ ಸಭೆಯಲ್ಲಿ ಬೆಳಿಗ್ಗೆ ಸುಮಾರು 11-30 ಗಂಟೆ ಸಮಯದಲ್ಲಿ ಪಂಚಾಯತಿ ಸದಸ್ಯರಾದ ಸುಂದರೇಶ್ ರವರು ನಾನು ರಿಪ್ಪನ್ ಪೇಟೆಯಲ್ಲಿ ನಿರ್ಮಿಸುತ್ತಿರುವ ಲೌಔಟ್ ವಿಚಾರದಲ್ಲಿ ದಾಖಲಾತಿಗಳು ಸರಿ ಇಲ್ಲಾ ಎಂದು ಮಾತನಾಡಿರುತ್ತಾರೆ. ಆಗ ನೀವು ಬಾರ್ & ರೆಸ್ಟೋರೆಂಟ್ ರವರ ಬಳಿ ಹಣ ಪಡೆದಿರುವುದಾಗಿ ಬಾರ್ ಮಾಲೀಕರಾದ ಅಶ್ವತ್ ಗೌಡ ಎಂಬುವವರು ನನಗೆ ಹೇಳಿದ್ದಾರೆ ಹಾಗೂ ನೀವು ಸಹ ಎಂ.ಪಿ.ಎಂ. ಜಾಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿದ್ದೀರಿ ಹೇಳಿದಾಗ ಸುಂದರೇಶ್ ರವರು ಏಕಾಏಕಿ ಅವಾಚ್ಯ ಶಬ್ದಗಳಿಂದ ಏನೋ ಸೂ**ಮಗ, ಬೋ*** ಮಗನೇ ಎಂದು ಬೈದು ಹೊಡೆಯಲು ಬಂದಿರುತ್ತಾರೆ. ಸುಂದರೇಶ್ ಗ್ರಾಮ ಪಂಚಾಯತಿಯ ಕೊಠಡಿಯಿಂದ ಹೊರ ಹೋಗಲು ಪ್ರಯತ್ನಿಸಿದಾಗ ಹೊರ ಹೋಗದಂತೆ ಅಡಗಟ್ಟಿ ನಿಲ್ಲಿಸಿ, ಕೈಗಳಿಂದ ಭುಜಕ್ಕೆ ಬಲಗೈಗೆ ಹೊಡೆದು ನೋವುಂಟು ಮಾಡಿರುತ್ತಾರೆ. ಇದರಿಂದ ಬಲಗೈ ಗೆ ರಕ್ತಗಾಯವಾಗಿರುತ್ತದೆ, ಆಗ ಸಭೆಯಲ್ಲಿ ಇದ್ದ ಉಳಿದ ಸದಸ್ಯರುಗಳು ಬಂದು ಜಗಳ ಬಿಡಿಸಿ ಜೀವ ರಕ್ಷಣೆ ಮಾಡಿರುತ್ತಾರೆ. ಆಗ ಸುಂದರೇಶ್ ರವರು ನಿನ್ನನ್ನು ಇಷ್ಟಕ್ಕೆ ಬಿಡುವುದಿಲ್ಲ ನಿನ್ನ ಜೀವ ತೆಗೆಯುತ್ತೇನೆ ಎಂದು ಜೀವ ಬೆದರಿಕೆ ಹಾಕಿರುತ್ತಾರ. ನಂತರ ಸ್ನೇಹಿತನ ಸಹಾಯದಿಂದ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿರುತ್ತೇನೆ ಆದ್ದರಿಂದ ನನ್ನನ್ನು ಅಡ್ಡಗಟ್ಟಿ, ತಡೆದು ಅವಾಚ್ಯವಾಗಿ ಬೈದು, ಕೈಗಳಿಂದ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿರುವ ಸುಂದರೇಶ್ ರವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಕೇಳಿಕೊಳ್ಳುತ್ತೇನೆ.

ಗ್ರಾಪಂ ಸದಸ್ಯ ಸುಂದರೇಶ್ ಕೆರೆಹಳ್ಳಿ ಸಲ್ಲಿಸಿರುವ ದೂರಿನಲ್ಲೇನಿದೆ..

ರಿಪ್ಪನ್ ಪೇಟೆ ಗ್ರಾಮ ಗ್ರಾಮ ಪಂಚಾಯ್ತಿಯಲ್ಲಿ ಬೆಳಿಗ್ಗೆ 11-30 ಕ್ಕೆ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದು ಲೇ-ಔಟ್ ವಿಚಾರವಾಗಿ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯುತ್ತಿತ್ತು ಈ ಸಂಧರ್ಭದಲ್ಲಿ ನಿರೂಪ್‌ ಕುಮಾರ್ ರವರು ಸಭೆಯಲ್ಲಿ ಚರ್ಚೆಯ ವಿಷಯವನ್ನು ಬಿಟ್ಟು ಬಾರ್ ವಿಚಾರವಾಗಿ ಬಾರ್ ಮಾಲೀಕರಿಂದ ಹಣಪಡೆದಿದ್ದರೆಂದು ನನ್ನ ಮೇಲೆ ಆರೋಪ ಮಾಡಿರುತ್ತಾರೆ. ಇದು ಸುಳ್ಳು ಆರೋಪವಾಗಿದ್ದು ಸಾಕ್ಷಿ ಸಮೇತ ಸಾಬೀತು ಪಡಿಸಲು ಅವರಿಗೆ ಕೇಳಿದಾಗ ಮಾತಿಗೆ ಮಾತು ಬೆಳೆಸಿ ಜಗಳಮಾಡಿ ನನ್ನನ್ನು ತೇಜೋವಧೆ ಮಾಡಲು ಪ್ರಯತ್ನ ಮಾಡಿದರು. ಗ್ರಾಮ ಪಂಚಾಯ್ತಿ ಸಭೆಯಿಂದ ಹೊರಹೋಗುವಾಗ ನಿರೂಪ್ ಕುಮಾರ್ ಹೊರಹೋಗದಂತೆ ಅಡ್ಡಗಟ್ಟಿ ನಿಲ್ಲಿಸಿ ಕೈಯಿಂದ ಹಲ್ಲೆ ಮಾಡಿ ಮತ್ತು ಗ್ರಾಮ ಪಂಚಾಯ್ತಿಯ ಕುರ್ಚಿ ತೆಗೆದುಕೊಂಡು ಹಲ್ಲೆ ಮಾಡಲು ಬಂದಿರುತ್ತಾನೆ.ನಂತರ ನನಗೆ ಸೂ***ಮಗ ಬೋ***ಮಗ ಮುಂತಾದ ಅವಾಚ್ಯ ಶಬ್ದಗಳಿಂದ ಬೈದು ಅವಮಾನಿಸಿರುತ್ತಾರೆ ಆಗ ಸಭೆಯಲ್ಲಿದ್ದ ಉಳಿದ ಸದಸ್ಯರು ಜಗಳ ಬಿಡಿಸಿ ನನನ್ನ್ನು ರಕ್ಷಣೆ ಮಾಡಿರುತ್ತಾರೆ.

ನಿರೂಪ್ ಕುಮಾರ್ ರವರು ನಿನ್ನನ್ನು ಇಷ್ಟಕ್ಕೆ ಸುಮ್ಮನೆ ಬಿಡುವುದಿಲ್ಲ ನಿನ್ನ ಜೀವ ತೆಗೆಯುತ್ತೇನೆ, ಎಂದು ಜೀವ ಬೆದರಿಕೆ ಹಾಕಿರುತ್ತಾನೆ. ಹಲ್ಲೆ ಮಾಡಿದ್ದರಿಂದ ನನ್ನ ಕೈಗೆ ಎದೆಗೆ ಒಳಪೆಟ್ಟಾಗಿರುತ್ತೆ ನಂತರ ಸ್ನೇಹಿತರ ಸಹಾಯ ಪಡೆದು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆದು ವಿಶ್ರಾಂತಿಗೆ ಮನೆಗೆ ತೆರಳಿರುತ್ತೇನೆ. ನಂತರ ಠಾಣೆಗೆ ಬಂದು ಅಡ್ಡಗಟ್ಟಿ ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ನಿರೂಪ್ ಕುಮಾರ್ ರವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ಕೋರುತ್ತೇನೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

16 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

18 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago