ಶಿವಮೊಗ್ಗ, ಏಪ್ರಿಲ್ 24, : ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ಈವರೆಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ.
ಈಕೆಯ ಚಹರೆ ತೆಳುವಾದ ಮೈಕಟ್ಟು, 4 ಅಡಿ 5 ಇಂಚು ಎತ್ತರ, ಕೋಲುಮುಖ, ತಲೆಯಲ್ಲಿ ಸುಮಾರು 14 ಇಂಚು ಉದ್ದದ ಕಪ್ಪು ಕೂದಲಿದ್ದು, ಎಡಕೈ ಮುಂಗೈ ಮೇಲೆ ಇಂಗ್ಲೀಷ್ ಅಕ್ಷರದಲ್ಲಿ MOM DAD ಮತ್ತು Priya ಎಂದು ಹಚ್ಚೆ ಹಾಕಿಸಿಕೊಂಡಿರುತ್ತಾಳೆ. ಕನ್ನಡ ಮಾತನಾಡಲು, ಓದಲು ಬರೆಯಲು ಬಲ್ಲವಳಾಗಿದ್ದು, ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಚೂಡಿದಾರ ಧರಿಸಿರುತ್ತಾಳೆ.
ಈ ಯುವತಿ ಪತ್ತೆಯಾದಲ್ಲಿ ಶಿವಮೊಗ್ಗಜಿಲ್ಲೆ :- 08182-261400, ತೀರ್ಥಹಳ್ಳಿ :- 08181 – 220388, ಮಾಳೂರು :- 9480803333, ಆಗುಂಬೆ :- 9480803314 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್