ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ.
ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು. ಈ ಸಂದರ್ಭ ಅಪಘಾತ ಸಂಭವಿಸಿದೆ. ಮೃತ ರೂಪಾ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರೂಪಾ ಪತಿ ಕಾಂತರಾಜ್ ಹಾಗೂ ರೂಪಾ ಸಹೋದರಿ ರೇಖಾ ಅವರಿಗೆ ತೀವ್ರ ರೀತಿಯ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾಳಿಯಪ್ಪನ್, ಸೋಮಶೇಖರ್, ಸುರೇಶ್ ಕುಮಾರ್ ಹಾಗೂ ಯಮುನಪ್ಪ ಅವರಿಗೆ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.