ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು
ಶಿವಮೊಗ್ಗ : ಕುಂಸಿ, ಆಯನೂರು ಸುತ್ತಮುತ್ತ ಇಂದು ಸಂಜೆ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ.
ಸಿಡಿಲು ಬಡಿದು ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.ಆಯನೂರು ಸುತ್ತಮುತ್ತ ಇಂದು ಸಂಜೆ ಸುಮಾರು ಮುಕ್ಕಾಲು ಗಂಟೆಗು ಹೆಚ್ಚು ಹೊತ್ತು ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಾಹಿತ ಜೋರು ಮಳೆ ಸುರಿದಿದೆ.
ಆಯನೂರು ಸಮೀಪದ ಬಾಳೆಕೊಪ್ಪ ಗ್ರಾಮದಲ್ಲಿ ಸಿಡಿಲಿಗೆ ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಇಲ್ಲಿನ ಹುಚ್ಚಪ್ಪ ಎಂಬುವವರಿಗೆ ಸೇರಿದ ಕುರಿಗಳನ್ನು ಗುಡ್ಡದ ಬಯಲಿನಲ್ಲಿ ಮೇಯಿಸುತ್ತಿದ್ದರು. ಈ ಸಂದರ್ಭ ಗುಡುಗು ಸಹಿತ ಮಳೆ ಶುರುವಾಗಿದೆ.ಈ ವೇಳೆ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ.
ಇದರಿಂದ ರೈತ ಹುಚ್ಚಪ್ಪ ಅವರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು, ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಗಾಳಿ, ಮಳೆಯಿಂದಾಗ ಈ ಭಾಗದಲ್ಲಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…