RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ
ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದವರು ಮಂಗನನ್ನು ಆರೈಕೆ ಮಾಡಿ ಕೂಡಲೇ ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿದ್ದಾರೆ. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕಾಗಮಿಸಿದ ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರು ಮಂಗನ ಸೂಕ್ತ ಆರೈಕೆಗಾಗಿ ಇಲಾಖೆಯ ವಾಹನದಲ್ಲಿ ಸಿಂಹಧಾಮಕ್ಕೆ ಕಳುಹಿಸಿಕೊಟ್ಟಿದ್ದಾರೆ.
ಈ ಸಂಧರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಅನಿಲ್ , ಆಕಾಶ್ ಸ್ಥಳೀಯರಾದ ರವೀಂದ್ರ ಕೆರೆಹಳ್ಳಿ , ಶ್ರೀನಿವಾಸ್ ಆಚಾರ್ , ಶಿವಾಜಿ ರಾವ್ , ದೇವರಾಜ್ ಹಾಗೂ ಇನ್ನಿತರರಿದ್ದರು.
ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…