RIPPONPETE | ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು.

ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಎರಡು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಹೊಸನಗರ ರಸ್ತೆಯ ಮಸೀದಿಯಿಂದ ಮೆರವಣಿಗೆ ಹೊರಟು ವಿನಾಯಕ ವೃತ್ತದವರಗೆ ಬಂದು ಸಭೆ ನಡೆಸಿ ತಕ್ಷಣ ಇಂತಹ ಹೀನ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯ ಮುಖಂಡರಾದ ಅರ್ ಎ ಚಾಬುಸಾಬ್ ಧರ್ಮದ ಹೆಸರು ಕೇಳಿ ನರಮೇಧ ನಡೆಸಿದ ಕೃತ್ಯದಿಂದಾಗಿ ಮುಸ್ಲಿಂ ಸಮಾಜ ತಲೆ ಎತ್ತದಂತೆ ಮಾಡಿದ್ದಾರೆಂದು ಹೇಳಿ, ಇಂತಹ ಹೀನಕೃತ್ಯ ಎಸಗಿದವರನ್ನು ಜೀವಂತ ಉಳಿಸಬಾರದು ಅವರಿಗೂ ಇಂತಹದೇ ಕಠಿಣ ಶಿಕ್ಷೆಯಾಗಬೇಕು ಇಂತಹ ನೀಚ ಕೃತ್ಯಕ್ಕೆ ಸಹಕರಿಸುವ ಪಾಕಿಸ್ಥಾನಕ್ಕೆ ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ಉತ್ತರ ನೀಡಬೇಕಾಗಿದೆ ಹಾಗೇಯೇ ಈ ಸಂಧರ್ಭದಲ್ಲಿ ದೇಶವಾಸಿಗಳೆಲ್ಲಾ ಜಾತಿ ಧರ್ಮ ಹಾಗೂ ರಾಜಕೀಯವನ್ನು ಬದಿಗಿಟ್ಟು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಬೇಕಾಗಿದೆ ಎಂದರು.

ಭಾರತ ದೇಶ ಶಾಂತಿ ಸೌಹಾರ್ದತೆಯ ದೇಶ ನಾವುಗಳಲ್ಲಾ ಶಾಂತಿ ಸೌಹಾರ್ದತೆಯಿಂದ ಯಾವುದೇ ಜಾತಿ ಭೇದ-ಭಾವನೆಯಿಲ್ಲದೆ ಭಾವೈಕ್ಯತೆಯಿಂದ ನಡೆದುಕೊಂಡು ಬರುತ್ತಿದ್ದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನರಮೇಧ ಎಸಗುವ ಮೂಲಕ ಸಮಾಜ ತಲೆ ತಗ್ಗಿಸುವಂತೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಅಮೀರ್ ಹಂಜಾ ಹೇಳಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕೆಡಿಪಿ ಸದಸ್ಯ ಆಸೀಪ್ ಭಾಷಾ ಮಾತನಾಡಿ ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಗೆ ಸಹಕರಿಸುವ ಶತ್ರು ರಾಷ್ಟ್ರ ಪಾಕಿಸ್ಥಾನವನ್ನು ಸದೆಬಡಿಯುವಲ್ಲಿ ಕೇಂದ್ರ ಸರ್ಕಾರ ಮುಂದಡಿ ಇಡುವ ಮೂಲಕ ತಮ್ಮದಲ್ಲದ ತಪ್ಪಿಗೆ ಜೀವವನ್ನು ಕಳೆದುಕೊಂಡ ಅಮಾಯಕ ಜೀವಗಳಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ ಎಂದರು.

ಈ ಸಂಧರ್ಭದಲ್ಲಿ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫಿ, ಜುಮ್ಮಾ ಮಸೀದಿ ಅಧ್ಯಕ್ಷ ಹಸನಬ, ಆಸಿಫ್‌ಭಾಷಾ,ಅಶ್ವಕ್ , ಖಲೀಲ್‌ಷರೀಫ್, ನಿಸಾರ್‌ಸುಮಯ್ಯ, ಅಜಾದ್, ಮೆಕ್ಕಾ ಮಸೀದಿ ಧರ್ಮಗುರುಗಳು ಹಾಗೂ ಮುಸ್ಲಿಂ ಸಮಾಜದ ಇನ್ನಿತರರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

6 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

6 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

10 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

12 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

12 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

22 hours ago