ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್

ರಿಪ್ಪನ್ ಪೇಟೆಯಲ್ಲಿ ಎರಡು ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭ

ಶಿವಮೊಗ್ಗ ಕೆ.ಎಂ.ಎಫ್ ವ್ಯಾಪ್ತಿಗೆ ಮೂರು ಜಿಲ್ಲೆಗಳು ಒಳಪಡುತ್ತಿದ್ದು ಪ್ರತಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ 25 ಮಿಲ್ಕ್ ಪಾರ್ಲರ್‌ಗಳನ್ನು ತೆರೆಯುವ ಮೂಲಕ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಾವಲಂಬಿ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಶಿಮೂಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು.

ಪಟ್ಟಣದ ಗ್ರಾಮ ಪಂಚಾಯ್ತಿ ಮುಂಭಾಗ ಮತ್ತು ಸಾಗರ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಎರಡು ಕೆ.ಎಂ.ಎಫ್ ಮಿಲ್ಕ್ ಪಾರ್ಲರ್‌ಗಳನ್ನು ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೋಬಳಿ ಮಟ್ಟದಲ್ಲಿ ಇಂತಹ ಮಿಲ್ಕ್ ಪಾರ್ಲರ್‌ಗಳನ್ನು ಪ್ರಥಮವಾಗಿ ಆರಂಭಿಸುವ ಮೂಲಕ ಗ್ರಾಮೀಣ ರೈತ ನಾಗರೀಕರಿಗೆ ಹಾಲಿನ ಗುಣಮಟ್ಟದ ಉತ್ಪನ್ನಗಳು ಸುಲಭವಾಗಿ ದೊರಕುವಂತೆ ಮಾಡಲಾಗಿದೆ. ಅಲ್ಲದೆ ನಂದಿನ ಹಾಲಿನ ಉತ್ಪನ್ನಗಳಲ್ಲಿ ಸಾಕಷ್ಟು ಗುಣಮಟ್ಟದ ತಿಂಡಿ – ತಿನಿಸು ವಸ್ತು ತಯಾರಿಸಲಾಗುತ್ತಿದ್ದು ಇದರ ಮಾರಾಟದಲ್ಲಿ ಸಹ ದಾಖಲೆ ಮೆರೆದಿದೆ. ಇನ್ನೂ ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಹ ಇಂತಹ ಮಿಲ್ಕ್ ಪಾರ್ಲರ್‌ಗಳು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಈ ವರ್ಷದಲ್ಲಿ ನಮ್ಮ ಶಿಮೂಲ್ ವ್ಯಾಪ್ತಿಯ ಮೂರು ಜಿಲ್ಲೆಗಳಲ್ಲಿ ತಲಾ 25 ಪಾರ್ಲರ್‌ಗಳನ್ನು ಆರಂಭಿಸಲಾಗುವುದು ಅದಕ್ಕೆ ಸ್ಥಳೀಯಾಡಳಿತ ಸ್ಥಳಾವಕಾಶ ಕಲ್ಪಿಸಿದರೆ ತಕ್ಷಣ ಆರಂಭಿಸುವುದಾಗಿ ಹೇಳಿದರು.

ಹಾಲಿನ ಉತ್ಪಾದನೆಯಲ್ಲಿ ಸಹ ಗಣನೀಯವಾಗಿ ಪ್ರಗತಿ ಹೊಂದಲಾಗಿದು ರೈತರಿಗೆ ಹೈನುಗಾರಿಕೆಯಲ್ಲಿ ಹೆಚ್ಚು ಪ್ರೋತ್ಸಾಹ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ತರಲಾಗುವುದೆಂದ ಅವರು ಹಾಲಿನ ಪೌಷ್ಟಿಕಾಂಶದ ಸಿಹಿ ಮತ್ತು ಖಾರದ ಉತ್ಪನ್ನಗಳನ್ನು ತಯಾರಿಸಲಾಗಿ ಮಾರುಕಟ್ಟೆಯಲ್ಲಿ ಸಹ ಹೆಚ್ಚು ಗ್ರಾಹಕರು ಕೇಳಿ ಪಡೆಯುವಂತೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಸಹಕಾರ ಬ್ಯಾಂಕ್ ಆಧ್ಯಕ್ಷ ಪರಮೇಶ್, ಗ್ರಾಮ ಪಂಚಾಯಿತ್ ಸದಸ್ಯ ಎನ್.ಚಂದ್ರೇಶ್, ಪ್ರಕಾಶಪಾಲೇಕರ್, ಶಾಸಕರ ಅಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಶಿವಪ್ಪ ವಡಾಹೊಸಳ್ಳಿ, ಪ್ರಕಾಶ ಪಾಲೇಕರ್, ಮಹಾಲಕ್ಷ್ಮಿ ಕೆ.ಎಂ.ಎಫ್.ನ ವ್ಯವಸ್ಥಾಪಕರು ಮತ್ತು ಸಿಬ್ಬಂದಿವರ್ಗ ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

18 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago