ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್
ರಿಪ್ಪನ್ ಪೇಟೆ: ಪಟ್ಟಣದ ಗ್ರಾಮ ಪಂಚಾಯಿತಿಯ ಬಿಜೆಪಿಯ ಸದಸ್ಯರು ಗಳು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯ ಕುರಿತು ಚರ್ಚಿಸುವುದನ್ನು ಬಿಟ್ಟು, ದುಂಡಾ ವರ್ತನೆಯ ಮೂಲಕ ಗ್ರಾಮ ಸಭೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಹೇಳಿದರು.
ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಯಾಗಿದ್ದು ಈ ಪಟ್ಟಣದ ನಾಗರಿಕ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಪಟ್ಟಣದ ಅಭಿವೃದ್ಧಿಗೆ ಹಗಲಿರುಳು ಗ್ರಾಮ ಪಂಚಾಯಿತಿಯ ಸದಸ್ಯರುಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರ ಮಾರ್ಗದರ್ಶನದಲ್ಲಿ ಹಾಗೂ ಸಹಕಾರದೊಂದಿಗೆ ಶ್ರಮಿಸುತ್ತಿದ್ದರು ಸಹ ಗ್ರಾಮ ಪಂಚಾಯಿತಿಯಲ್ಲಿನ ಬಿಜೆಪಿ ಬೆಂಬಲಿತ ಸದಸ್ಯರುಗಳು ಪಟ್ಟಣದ ಅಭಿವೃದ್ಧಿಗೆ ಸಹಕಾರ ನೀಡದೆ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಪಟ್ಟಣದ ಅಭಿವೃದ್ಧಿ ವಿಷಯವನ್ನು ಬಿಟ್ಟು ಬೇರೆ ಖಾಸಗಿಯವರ ವೈಯಕ್ತಿಕ ವಿಷಯಗಳ ಬಗ್ಗೆ ಚರ್ಚಿಸಿ ಸಾಮಾನ್ಯ ಸಭೆಯ ನೀತಿ ನಿಯಮಗಳ ದಿಕ್ಕನ್ನೇ ಬದಲಾಯಿಸಲು ಯತ್ನಿಸುವ ಮೂಲಕ ಗ್ರಾಮದ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ನನಗೆ ಕಾರ್ಯನಿರ್ವಹಿಸಲು ಬಿಡದೆ ಹಾಗೂ ಗ್ರಾಮ ಪಂಚಾಯಿತಿ ಸಭೆಗೆ ಅಡ್ಡಿಪಡಿಸುವುದರ ಮೂಲಕ ಸಭೆಯನ್ನೇ ಬಹಿಸ್ಕರಿಸಿ ಹೊರ ನಡೆಯುವುದು, ಹಾಗೆಯೇ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಮೇಲೆ ಹಲ್ಲೆಗೆ ಪ್ರಯತ್ನಿಸುವುದು ಈ ಸದಸ್ಯರುಗಳ ಹವ್ಯಾಸವಾಗಿ ಬಿಟ್ಟಿದೆ ಇಂತಹ ದುಂಡಾ ವರ್ತನೆಗೆ ನಾನು ಎದುರುವುದಿಲ್ಲ ಎಂದು ಹೇಳಿದರು.
ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರುಗಳಾಗಿ ಕಾರ್ಯನಿರ್ವಹಿಸಿ ಈಗ ಮಾಜಿ ಅಧ್ಯಕ್ಷರುಗಳಾಗಿರುವ ಕೆಲ ಹಾಲಿ ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯರುಗಳೇ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗೆ ನೇರವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ದೂರಿದರು.
ಗ್ರಾಮ ಪಂಚಾಯಿತಿ ಸದಸ್ಯ ಆಸಿಫ್ ಭಾಷಾ ಮಾತನಾಡಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ಪಟ್ಟಣದ ಸರ್ವಾಂಗಿಣ ಅಭಿವೃದ್ಧಿ, ರಸ್ತೆ ಅಗಲೀಕರಣ ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಸರ್ಕಾರದಿಂದ ಅನುದಾನವನ್ನು ತರುವುದರ ಮೂಲಕ ಸರ್ವಾಂಗಿಣ ಅಭಿವೃದ್ಧಿಗಾಗಿ ಕೈ ಜೋಡಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಗ್ರಾಮ ಪಂಚಾಯಿತಿನ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರುಗಳು ಗ್ರಾಮದ ಅಭಿವೃದ್ಧಿಯ ಕುರಿತು ಚರ್ಚಿಸುವುದನ್ನು ಬಿಟ್ಟು ಗ್ರಾಮ ಪಂಚಾಯಿತಿ ಕಾಯ್ದೆಯ ಎರಡು ಮೂರು ಸೆಕ್ಷನ್ ಗಳನ್ನು ಹೇಳಿಕೊಂಡು ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯ ಸಮಯವನ್ನೇ ಹಾಳು ಮಾಡುತ್ತಿದ್ದಾರೆ, ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳಾದ ಪ್ರಕಾಶ್ ಪಾಲೇಕರ್ ಮಧುಸೂದನ್ ಡಿ ಇ,ಗಣಪತಿ ಗವಟೂರು, ಚಂದ್ರೇಶ್, ನಿರೂಪ್ ಕುಮಾರ್, ನಿರುಪಮಾ ರಾಕೇಶ್ , ಸಾರಾಬಿ ಹೈದರ್ , ಪ್ರಕಾಶ್ ಪಾಲೇಕರ್ ಹಾಗೂ ಇನ್ನಿತರರಿದ್ದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…