ಒಂದು ಕಿಸ್ ಗೆ 50 ಸಾವಿರ – ಸುಂದರಿ ಟೀಚರ್ ನ ಹನಿ ಮನಿ ಕಹಾನಿ,ಪೋಷಕರೇ ಇವಳ ಟಾರ್ಗೇಟ್ , ನಟೋರಿಯಸ್ ಹನಿಟ್ರ್ಯಾಪ್ ಗ್ಯಾಂಗ್ ಬಂಧನ

ಒಂದು ಚುಂಬನಕ್ಕೆ 50 ಸಾವಿರ – ಸುಂದರಿ ಟೀಚರ್ ನ ಹನಿ ಮನಿ ಕಹಾನಿ,ಪೋಷಕರೇ ಇವಳ ಟಾರ್ಗೇಟ್ , ನಟೋರಿಯಸ್ ಹನಿಟ್ರ್ಯಾಪ್ ಗ್ಯಾಂಗ್ ಬಂಧನ

ಪ್ರಿ ಸ್ಕೂಲ್​ ನ ಖತರ್ನಾಕ್ ಟೀಚರ್ ಒಬ್ಬಳು ಶಾಲೆಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ.ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ ಟೀಚರ್ ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಖಾಸಗಿ ಪ್ರೀಸ್ಕೂಲ್ (Pre School) ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಎಸಗಿದ ಶಿಕ್ಷಕಿ.

ಶಿಕ್ಷಕಿಯ ಹನಿಟ್ರ್ಯಾಪ್ ಬಲೆಗೆ ಬಿದ್ದ ಪೋಷಕ

ಆರೋಪಿ ಶ್ರೀದೇವಿ ರುಡಿಗಿಗೆ 2023 ರಲ್ಲಿ ರಾಕೇಶ್ ಎಂಬ ಪೋಷಕನ ಪರಿಚಯವಾಗಿತ್ತು. ರಾಕೇಶ್​​ನಿಂದ ಶಾಲೆ ನಿರ್ವಹಣೆ, ತಂದೆಯ ಚಿಕಿತ್ಸೆಗೆಂದು ಶ್ರೀದೇವಿ 4 ಲಕ್ಷ ರೂ. ಸಾಲ ಪಡೆದಿದ್ದಳು. 2024ರ ಮಾರ್ಚ್​ನಲ್ಲಿ ವಾಪಸ್ ಕೊಡುವುದಾಗಿ ತಿಳಿಸಿದ್ದಳು. ಆದರೆ, ಹಣ ವಾಪಸ್ ಕೇಳಿದಾಗ ಕೊಟ್ಟಿರಲಿಲ್ಲ. ‘ತುಂಬಾ ಕಷ್ಟವಿದೆ. ಹಣ ಈಗ ಕೊಡಲು ಆಗುವುದಿಲ್ಲ. ನೀವು ಶಾಲೆಯ ಪಾರ್ಟನರ್ ಆಗಿ’ ಎಂದಿದ್ದಳು.

ಶುರುವಾಯ್ತು ಪಾರ್ಟನರ್​ಶಿಪ್, ಸುತ್ತಾಟ

ನಂತರ ಇಬ್ಬರ ನಡುವೆ ಸಲುಗೆ ಬೆಳೆದಿದೆ. ಇಬ್ಬರೂ ಹಲವೆಡೆ ಜತೆಯಾಗಿ ಸುತ್ತಾಟ ನಡೆಸಿದ್ದಾರೆ. ಶ್ರೀದೇವಿ‌ ಜೊತೆ ಮಾತನಾಡಲೆಂದೇ ರಾಕೇಶ್ ಹೊಸ ಸಿಮ್ ಹಾಗೂ ಪೋನ್ ಖರೀದಿಸಿದ್ದರು. ಆದರೆ, ನಂತರ ಜನವರಿ ಮೊದಲ ವಾರದಲ್ಲಿ ಹಣ ವಾಪಸ್ ಕೇಳಿದ್ದರು. ಹಣ ವಾಪಸ್ ಕೇಳಿದ್ದ ರಾಕೇಶ್​ಗೆ, ‘ನಿನ್ನ ಜೊತೆ ರಿಲೇಶನ್ ಶಿಪ್​​ನಲ್ಲಿ ಇರುತ್ತೇನೆ’ ಎಂದು ಹೇಳಿದ್ದ ಶ್ರೀದೇವಿ 15 ಲಕ್ಷ ರೂ. ಹಣ ಕೇಳಿದ್ದಳು. ಇದಕ್ಕೆ ರಾಕೇಶ್ ಒಪ್ಪಿರಲಿಲ್ಲ.

ಮನೆಗೆ ತೆರಳಿ ಮುತ್ತಿಟ್ಟಿದ್ದಕ್ಕೆ 50 ಸಾವಿರ ರೂ!

ನಂತರ ಶ್ರೀದೇದಿ ಪೋಷಕ ರಾಕೇಶ್ ಮನೆಗೆ ತೆರಳಿ ಆತನಿಗೆ ಮುತ್ತುಕೊಟ್ಟಿದ್ದಳು. ಬಳಿಕ ಬ್ಲ್ಯಾಕ್​ಮೇಲ್ ಮಾಡಿ 50 ಸಾವಿರ ರೂ. ಪಡೆದಿದ್ದಳು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆ ಬಳಿಕ, ಪದೇ ಪದೇ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಆಕೆ ಜತೆ ಸಂಪರ್ಕಕ್ಕೆ ಇಟ್ಟುಕೊಂಡಿದ್ದ ಸಿಮ್ ಕಾರ್ಡ್ ಅನ್ನು ರಾಕೇಶ್ ಮುರಿದು ಬಿಸಾಡಿದ್ದರು.

ಮಾರ್ಚ್ 12 ರಂದು ರಾಕೇಶ್ ಪತ್ನಿಗೆ ಕರೆ ಮಾಡಿದ್ದ ಶ್ರೀದೇವಿ , ಮಕ್ಕಳ ಸ್ಕೂಲ್ ಟಿಸಿ ಕಳುಹಿಸಿಕೊಡುತ್ತೇನೆ, ನಿಮ್ಮ ಪತಿಯನ್ನು ಕಳುಹಿಸಿ ಎಂದಿದ್ದಳು. ಅದರಂತೆ ಶ್ರೀದೇವಿಯ ಪ್ರೀ ಸ್ಕೂಲ್​​ಗೆ ರಾಕೇಶ್ ತೆರಳಿದ್ದರು. ಆಗ ಅಲ್ಲಿ ಶ್ರೀದೇವಿ ಜೊತೆ ಹಾಜರಿದ್ದ ಇತರೆ ಆರೋಪಿಗಳಾದ ಸಾಗರ್ ಹಾಗೂ ಗಣೇಶ್ ಬೆದರಿಕೆ ಹಾಕಿದ್ದರು. ”ಸಾಗರ್ ಜೊತೆ ಶ್ರೀದೇವಿಗೆ ನಿಶ್ಚಿತಾರ್ಥ ಆಗಿದೆ. ಆದರೆ ನೀನು ಆಕೆ ಜೊತೆ ಮಜಾ ಮಾಡುತ್ತಿದ್ದಿ” ಎಂದು ಆರೋಪಿ ಗಣೇಶ್ ಬೆದರಿಕೆ ಹಾಕಿದ್ದ. ಬಳಿಕ ಕಾರಿನಲ್ಲಿ‌ ಕೂರಿಸಿಕೊಂಡು, ”ಯಾರಿಗೂ ವಿಚಾರ ಹೇಳಬಾರದು ಎಂದರೆ 1 ಕೋಟಿ‌ ರೂ. ಕೊಡು” ಎಂದು ಬ್ಲ್ಯಾಕ್​ಮೇಲ್ ಮಾಡಿದ್ದ. ಕೊನೆಯದಾಗಿ ಆರೋಪಿಗಳು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. 1.90 ಲಕ್ಷ ರೂ. ಹಣ ಪಡೆದು ಬಿಟ್ಟು ಕಳುಹಿಸಿದ್ದರು. ಆದರೆ, ಉಳಿದ ಹಣ ನೀಡುವಂತೆ ಪ್ರಾಣ ಬೆದರಿಕೆ ಹಾಕಿದ್ದರು ಎಂದು ರಾಕೇಶ್ ಆರೋಪಿಸಿದ್ದಾರೆ.

ಹೀಗಾಗಿ ರಾಕೇಶ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಶ್ರೀದೇವಿ, ಅರುಣ್ ಮತ್ತು ಸಾಗರ್​ರನ್ನು ಬಂಧಿಸಲಾಗಿದೆ. ಸದ್ಯ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಮೂವರು ಆರೋಪಿಗಳು ಕೂಡ ವಿಜಯಪುರ ಮೂಲದವರಾಗಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago