ಚಾಕೊಲೇಟ್ ಕೊಡಿಸುವ ನೆಪ ಹೇಳಿ 5 ವರ್ಷದ ಬಾಲಕಿಯ ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ – ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ!
ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು.
ಇನ್ನು ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿತ್ತು. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದರು. ಆದರೆ ಪೊಲೀಸರ ಮೇಲೆ ರಿತೇಶ್ ಕುಮಾರ್ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ನುಗ್ಗಿದ್ದರಿಂದ ಅಲ್ಲೆ ಕುಸಿದುಬಿದ್ದನು. ಆರೋಪಿಯನ್ನು ರಕ್ಷಿಸುವ ಸಲುವಾಗಿ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿತ್ತು. ಬಾಲಕಿ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದು ಹೊರೆಗೆ ಮಗು ಆಟವಾಡುತ್ತಿತ್ತು. ಇದನ್ನು ಗಮನಿಸಿದ ರಿತೇಶ್ ಕುಮಾರ್ ಚಾಕಲೇಟ್ ಕೊಡುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ. ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮಗಳು ಕಾಣೆಯಾಗಿದ್ದಾಳೆಂದು ತಾಯಿಗೆ ತಿಳಿದಾಗ, ಆಕೆ ಸ್ಥಳೀಯರೊಂದಿಗೆ ಸೇರಿ ಆಕೆಗಾಗಿ ಹುಡುಕಾಟ ಆರಂಭಿಸಿದರು. ಬಾಲಕಿಯ ಪೋಷಕರು ಕೊಪ್ಪಳದವರಾಗಿದ್ದು, ಪೇಂಟಿಂಗ್ ಕೆಲಸಕ್ಕಾಗಿ ಹುಬ್ಬಳ್ಳಿಗೆ ಬಂದಿದ್ದರು ಸ್ಥಳೀಯರ ಪ್ರಕಾರ, ನಿರ್ಮಾಣ ಹಂತದ ಕಟ್ಟಡದ ಬಳಕೆಯಾಗದ ಶೌಚಾಲಯದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.
ಶವ ಪತ್ತೆಯಾದ ಕೂಡಲೇ ಸ್ಥಳೀಯರು, ವಿಶೇಷವಾಗಿ ಮಹಿಳೆಯರು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗೆ ಭೇಟಿ ನೀಡಿ ಪ್ರತಿಭಟನಾ ನಿರತ ಜನರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಇನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಸ್ಥಳೀಯರು ಆರೋಪಿಯನ್ನು ಗುರುತಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆಗೆ ಇಳಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್