ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು.

ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು.

ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಪ್ರವಾಸಿಗರನ್ನು ಕೊಂದವರಿಗೆ ಸೂಕ್ತ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.ಮರ್ಕಜಿ ಸುನ್ನಿ ಜಾಮೀಯಾ ಮಸ್ಜಿದ್ ಕಮಿಟಿಯವರು ಉಗ್ರವಾದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಭಾರತೀಯ ಪ್ರಜೆಗಳನ್ನು ಉಗ್ರವಾದಿಗಳು ಅವರ ಕುಟುಂಬದವರ ಮುಂದೆಯೇ ಗುಂಡು ಹಾರಿಸಿ ಕೊಂದಿದ್ದಾರೆ. ಇದು ಮಾನವ ಸಮಾಜವೇ ತಲೆ ತಗ್ಗಿಸುವಂಥದ್ದು. ಉಗ್ರವಾದಿಗಳಿಗೆ ಯಾವುದೇ ಜಾತಿ, ಧರ್ಮಗಳಿಲ್ಲ. ಮಾನವಿಯತೆ ಇಲ್ಲದ ಇಂತಹವರನ್ನು ಭಾರತ ಸರ್ಕಾರ ಹುಡುಕಿ ನಡುರಸ್ತೆಯಲ್ಲೇ ಗುಂಡಿಕ್ಕಿ ಕೊಲ್ಲಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಉಗ್ರರಿಂದ ಹತ್ಯೆಯಾದವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ, ಮೃತರ ಆತ್ಮಕ್ಕೆ ಶಾಂತಿ‌ ಸಿಗಲೆಂದು ಪ್ರಾರ್ಥಿಸಲಾಯಿತು.

ನಗರದ ಶಿವಪ್ಪ‌ನಾಯಕ ವೃತ್ತದಲ್ಲಿ ಜಿಲ್ಲಾ‌ ಕಾಂಗ್ರೆಸ್​ನ ಉತ್ತರ ಬ್ಲಾಕ್ ಕಾಂಗ್ರೆಸ್​ನ ಪದಾಧಿಕಾರಿಗಳು ಪಹಲ್ಗಾಮ್​ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್​​ ರಾವ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಹತ್ಯೆಯಾದ ಇತರ ವ್ಯಕ್ತಿಗಳ ಆತ್ಮಕ್ಕೆ ಶಾಂತಿ ಕೋರಿದರು.

ಮೃತ ಮಂಜುನಾಥ್ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಮೃತಪಟ್ಟ ಮಂಜುನಾಥ್​​ ಅವರ ವಿಜಯ ನಗರದಲ್ಲಿರುವ ಮನೆಗೆ ಭೇಟಿ ನೀಡಿ ತಾಯಿ ಸುಮತಿ, ಸಹೋದರಿ ರೂಪ ಹಾಗೂ ಸಂಬಂಧಿಕರಿಗೆ ಸಾಂತ್ವನ ಹೇಳಿದರು.

ಬಳಿಕ ಮಾತನಾಡಿದ ಅವರು, “ಈ ಸಂದರ್ಭದಲ್ಲಿ ಮಂಜುನಾಥ್​ ಅವರ ಕುಟುಂಬಸ್ಥರ ಜೊತೆ ನಾವು ನಿಲ್ಲಬೇಕಿದೆ. ಇಂದು ಸಂಜೆ ಆರು ಗಂಟೆಗೆ ಕಾಶ್ಮೀರದಿಂದ ಮಂಜುನಾಥ್​ ಅವರ ಮೃತದೇಹ ಹೊರಡಲಿದೆ. ನಾನು ಚೀಫ್ ಸೆಕ್ರೆಟರಿ ಜೊತೆಗೂ ಮಾತನಾಡುತ್ತಿದ್ದೇನೆ. ಅವರು ಪ್ರವಾಸಕ್ಕೆಂದು ಫ್ಯಾಮಿಲಿ ಜೊತೆ ಹೊರಡಿದ್ದರು. ನಾನು ಸಂತೋಷ್ ಲಾಡ್ ಅವರೊಂದಿಗೂ ಮಾತನಾಡಿದ್ದೇನೆ. ಧೈರ್ಯವಾಗಿರಿ, ನಾನು ಎಲ್ಲರನ್ನೂ ಕರೆತರುತ್ತೇನೆ ಎಂದು ಅವರು ಹೇಳಿದ್ದಾರೆ” ಎಂದರು.

ಕೇಂದ್ರ ಸರ್ಕಾರವನ್ನು ಟೀಕಿಸಿದ ಗೋಪಾಲಕೃಷ್ಣ ಬೇಳೂರು

“ನಮ್ಮ ರಾಜ್ಯದ ಮೂವರು ಮೃತಪಟ್ಟಿದ್ದಾರೆ. ಪ್ರತೀ ಬಾರಿ ದಾಳಿ ನಡೆದಾಗ ನಾವು ಅವರನ್ನು ಬಿಡೋದಿಲ್ಲ ಎಂದು ಹೇಳುತ್ತಿದ್ದಾರೆ. ಪುಲ್ವಾಮಾ ದಾಳಿಯ ಸಂದರ್ಭದಲ್ಲೂ ಕೂಡ ಇದನ್ನೇ ಹೇಳಿದ್ದೀರಿ. ಅಂತಹ ಸ್ಥಳಗಳಲ್ಲಿ ಪ್ರವಾಸಿಗರನ್ನು ಬಿಡುವ ಕೆಲಸವನ್ನೇಕೆ ಮಾಡಿದ್ದೀರಿ?. ಪ್ರವಾಸಿಗರನ್ನು ಬಿಟ್ಟಿದ್ದಾರೆ ಎಂದರೆ ಕೇಂದ್ರ ಸರ್ಕಾರ ಭದ್ರತೆ ವಹಿಸಬೇಕು.

ಸಾವು-ನೋವುಗಳಾದಾಗ ಸುಮ್ಮನೆ ಬಿಡುವುದಿಲ್ಲ ಎಂದು ಹೇಳುತ್ತೀರಿ. ಪುಲ್ವಾಮಾ ದಾಳಿಯಾದಾಗ ಎಷ್ಟು ಜನ ಸೈನಿಕರು ಸಾವನ್ನಪ್ಪಿದರು. ಆಗ ಭಯೋತ್ಪಾದಕರನ್ನು ಸಾಯಿಸಿದ್ದೇವೆ ಎಂದು ಹೇಳಿದ್ದಾರೆ, ಅದು ನಿಜನೋ ಸುಳ್ಳೋ ಗೊತ್ತಿಲ್ಲ” ಎಂದು ಟೀಕಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

15 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

16 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

17 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago