January 11, 2026

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ.

ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 143 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.25ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇದರಲ್ಲಿ ಕಲಾ ವಿಭಾಗ 94.12%, ವಿಜ್ಞಾನ ವಿಭಾಗ ದಲ್ಲಿ 95.31%, ವಾಣಿಜ್ಯ ವಿಭಾಗ 94.34%  ಫಲಿತಾಂಶ ಬಂದಿದೆ.

ಕಾಲೇಜಿನ ಹಂತದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು

ನಿರಂಜನ್ ಕೆ ಎಸ್ – 559 ವಿಜ್ಞಾನ
ಸೃಜನ್ ಹೆಚ್ – 558- ವಾಣಿಜ್ಯ
ವೀಣಾ ಎಂ ಡಿ – 567- ಕಲಾ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾಗಿದ್ದಾರೆ.

ಅತ್ಯುತ್ತಮವಾದ ಫಲಿತಾಂಶಗಳನ್ನು ಪಡೆದುಕೊಳ್ಳುವುದರ ಮೂಲಕ ಕಾಲೇಜಿಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗಕ್ಕೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಆರಗ ಜ್ಞಾನೇಂದ್ರ ಉಪಾಧ್ಯಕ್ಷ ಸೋಮಶೇಖರ್  ಮತ್ತು ಸದಸ್ಯರು ಕಾಲೇಜು ಅಭಿವೃದ್ಧಿ ಸಮಿತಿ. ಹಾಗೂ ಕಾಲೇಜಿನ ಪ್ರಾಚಾರ್ಯ ಮಹಮದ್ ನಜಹತ್ ಉಲ್ಲಾ  ಅಭಿನಂದನೆ ಸಲ್ಲಿಸಿದ್ದಾರೆ.

About The Author

Leave a Reply

Your email address will not be published. Required fields are marked *