RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್ ಹಾಲ್” ಲೋಕಾರ್ಪಣೆ
ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು.
ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ ಗೋಪಾಲಕೃಷ್ಣ ಉದ್ಘಾಟಿಸಿ ನಂತರ ಮಾಲೀಕರಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕರಾದ ಆರಗ ಜ್ಞಾನೇಂದ್ರ , ತಹಶೀಲ್ದಾರ್ ರಶ್ಮಿ ಹಾಲೇಶ್ , ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ , ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ , ಜೆಡಿಎಸ್ ರಾಜ್ಯ ಮುಖಂಡರಾದ ಆರ್ ಎ ಚಾಬುಸಾಬ್ , ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ , ಮುಖಂಡರಾದ ಮಧುಸೂಧನ್ , ಉಬೇದುಲ್ಲಾ ಷರೀಫ್ , ಆಸೀಫ಼್ ಭಾಷಾ , ರವೀಂದ್ರ ಕೆರೆಹಳ್ಳಿ , ಮಂಜು ಸಣ್ಣಕ್ಕಿ , ನಿರೂಪ್ ಕುಮಾರ್ , ಗಣಪತಿ ಗವಟೂರು , ವಿಜಯ್ ಮಳವಳ್ಳಿ , ನಿರುಪಮಾ ರಾಕೇಶ್ , ಸಾರಾಭಿ ಹೈದರ್ ಹಾಗೂ ಇನ್ನಿತರರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply