ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು

ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಹೀಗಾಗಿ ರಿಪ್ಪನ್ ಪೇಟೆ ಪೊಲೀಸರು ಸೂಡೂರು ಅಪಘಾತ ವಲಯದಲ್ಲಿ ಯಶಸ್ವಿಯಾದ ರೀತಿಯಲ್ಲಿಯೇ  ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೋಡೂರಿನ ಶಾಂತಪುರದಲ್ಲಿ ಕೈ ಹಾಕಿದ್ದಾರೆ.

ಇತ್ತೀಚೆಗೆ ಹಲವು ಅಪಘಾತ ನಡೆಯುತ್ತಿರುವ ಕೋಡೂರು ಬಳಿಯ ಶಾಂತಪುರ ಗ್ರಾಮದ ಬಳಿಯಲ್ಲಿ ರಿಪ್ಪನ್ ಪೇಟೆ ಪೊಲೀಸ್ ಹಾಗೂ ಕೋಡೂರು ಗ್ರಾಪಂ ಸಹಯೋಗದಲ್ಲಿ ಅಪಘಾತ ವಲಯಗಳಲ್ಲಿ ರಿಫ್ಲೆಕ್ಟರ್ ರೇಡಿಯಂ, ಸೂಚನಾ ಫಲಕವನ್ನು, ಅಳವಡಿಸುವುದರ ಮೂಲಕ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ರಸ್ತೆ ಸುರಕ್ಷತೆಯ ಅರಿವು ಮೂಡಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ರಿಪ್ಪನ್ ಪೇಟೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ಮತ್ತು ಸಿಬ್ಬಂದಿಗಳ ಹಾಗೂ ಕೋಡೂರು ಗ್ರಾಪಂ ಆಡಳಿತ ಮಂಡಳಿಯವರು ಮಂಗಳವಾರ ಮಧ್ಯಾಹ್ನದಿಂದ ಶಾಂತಪುರ ಸುತ್ತಮುತ್ತಲಿನ ಅಪಘಾತ ವಲಯದಲ್ಲಿ ಸುಮಾರು ಆರಕ್ಕೂ ಹೆಚ್ಚು ಸೂಚನಾ ಫಲಕ ಹಾಗೂ ರಸ್ತೆ ಬದಿಯಲ್ಲಿನ ಮರಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸಲಾಯಿತು.

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಮತ್ತು ಅವರ ಸಿಬ್ಬಂದಿ ವರ್ಗ ಮಾಡುತ್ತಿರುವ ಈ ಸಮಾಜಮುಖಿ ಕಾರ್ಯವು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ಈ ಸಂದರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಉಮೇಶ್ , ವಿಕ್ಟರ್ , ನಾಗೇಶ್ ಕೋಡೂರು ಗ್ರಾಪಂ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ , ಮಾಜಿ ಅಧ್ಯಕ್ಷರಾದ ಉಮೇಶ್ ಸೇರಿದಂತೆ ಇನ್ನಿತರರಿದ್ದರು.

ಸೂಡೂರಿನಲ್ಲಿ ಯಶಸ್ವಿಯಾದ ರಿಪ್ಪನ್ ಪೇಟೆ ಪೊಲೀಸರ ಜಾಗೃತಿ ಅಭಿಯಾನ

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ತಿರುವು ಕಳೆದ ಒಂದು ವರ್ಷಗಳ ಹಿಂದೆ ಅಪಘಾತಗಳಿಗೆ ಹೆಸರು ವಾಸಿಯಾಗಿತ್ತು.ಪ್ರತಿ ತಿಂಗಳಿಗೆ ಹಲವಾರು ಅಪಘಾತ ನಡೆಯುತ್ತಲೇ ಇತ್ತು.ಅದೆಷ್ಟೋ ಕುಟುಂಬಗಳು ಅನಾಥವಾಗಿತ್ತು.ಈ ದಿಸೆಯಲ್ಲಿ ಅಪಘಾತ ತಡೆಯಲು ಒಂದು ವರ್ಷದ ಹಿಂದೆ  ರಿಪ್ಪನ್ ಪೇಟೆ ಪೊಲೀಸ್ ಇಲಾಖೆ ವಿಶಿಷ್ಟ ರೀತಿಯಲ್ಲಿ ಕಾರ್ಯೋನ್ಮುಖರಾಗಿ ರಿಫ್ಲೆಕ್ಟರ್ ರೇಡಿಯಂ, ಸೂಚನಾ ಫಲಕವನ್ನು, ಅಳವಡಿಸಿದ್ದರು.ಆ ನಂತರದಲ್ಲಿ ಆ ವಲಯದಲ್ಲಿ ಇಲ್ಲಿಯವರೆಗೂ ಒಂದೇ ಒಂದು ಅಪಘಾತವಾಗಿರುವ ಬಗ್ಗೆ ವರದಿಯಾಗಿಲ್ಲ .. ಇದಲ್ಲವೇ ನಿಜವಾದ ಜಾಗೃತಿ ಕಾರ್ಯಕ್ರಮ..!!

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

16 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

16 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

18 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago