ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ

ಶಿವಮೊಗ್ಗ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ಉಗ್ರವಾದಿಗಳಿಗೆ ಶಕ್ತಿ ತುಂಬುವ ಹೇಳಿಕೆ ನೀಡಿದ್ದಾರೆ. ಅವರನ್ನು ಬಂಧಿಸಬೇಕು ಅಥವಾ ಗುಂಡಿಕ್ಕಿ ಕೊಲ್ಲಬೇಕು ಎಂದು ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಉಗ್ರವಾದಿಗಳ ಗುಂಡಿನ ದಾಳಿಯಲ್ಲಿ ಮಡಿದವರಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಈ ಸಮಯದಲ್ಲಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಸಹಿಸಲು ಸಾಧ್ಯವಿಲ್ಲ, ಉಗ್ರವಾದಿಗಳಿಗೆ ಶಕ್ತಿ ತುಂಬುವ ಹೇಳಿಕೆ ನೀಡಿರುವ ರಾಬರ್ಟ್ ವಾದ್ರಾ ಒಬ್ಬ ದೇಶ ದ್ರೋಹಿ. ಆತ ಭೂಮಿಯ ಮೇಲೆ ಇರಲು ನಾಲಾಯಕ್ಕು ಆದ್ದರಿಂದ ಮೊದಲಿಗೆ ಆತನನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳುತ್ತಿದ್ದೇನೆ. ನರಮೇಧ ನಡೆಯುತ್ತಿರುವ ಈ ಹೊತ್ತಿನಲ್ಲಿ ದೇಶವನ್ನು ಉಳಿಸಿಕೊಳ್ಳಬೇಕಾಗಿದೆ’ ಎಂದು ಎಸ್.ಎನ್. ಚನ್ನಬಸಪ್ಪ ಎಂದು  ಹೇಳಿದರು.

ಪಾಕಿಸ್ತಾನಕ್ಕೆ ಬಾಂಬ್ ಹಾಕಿ, ಭಾರತ ಮಾತೆಗೆ ಹೂವು ಹಾಕಿ ಎಂಬುದು ಕೇವಲ ಘೋಷಣೆಯಾಗಬಾರದು. ಇದು ಕಾರ್ಯಾಗತ ಆಗಬೇಕು. ಇಡೀ ಭಾರತದ ಜನಮಾನಸದ ಬೇಡಿಕೆಯಾಗಿದೆ ಎಂದು ಹೇಳಿದರು.

ಉಗ್ರರ ದಾಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಕಂಬನಿ ಮಿಡಿಯುವ ಜೊತೆಗೆ ಭದ್ರತಾ ವೈಫಲ್ಯ ಎಂದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿವೆ. ಇದು ಖಂಡನೀಯ. ಈ ರೀತಿಯ ಮಾಡುವುದು ದೇಶದ್ರೋಹದ ಕಾರ್ಯ ಎಂದು ಕಿಡಿಕಾರಿದರು.

ಈ ಹಿಂದೆ ಭದ್ರತಾ ವೈಫಲ್ಯ ಆಗಿಲ್ವ ಎಂದು ಪ್ರಶ್ನಿಸಿದ ಅವರು, ಭಾರತದ ತಾಕತ್ತು ಇಡೀ ಜಗತ್ತಿಗೆ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಉಗ್ರರಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಭಯೋತ್ಪಾದನೆ ಮಟ್ಟ ಹಾಕುವ ನಿರ್ಧಾರ ಕೈಗೊಂಡಿದೆ. ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಕ್ರಮ ಕೈಗೊಂಡಿದೆ. ಭಯೋತ್ಪಾದನೆ ನಿರ್ಮೂಲನೆಗೆ ಭಾರತ ಕೈಗೊಂಡಿರುವ ನಿಲುವಿಗೆ ನೆರೆ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮೋಹನ್ ರೆಡ್ಡಿ, ಜ್ಞಾನೇಶ್ವರ್, ಕೆ.ಎನ್.ಜಗದೀಶ್, ಎನ್.ಜೆ.ನಾಗರಾಜ್, ಮಂಜುನಾಥ್‌ ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

6 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

6 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

10 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

12 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

12 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

22 hours ago