ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಸಾಗರ, ಏ.೧೨ : ಶರಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ, ಸಾಗರ ತಾಲೂಕು ತಾಳಗುಪ್ಪ ಸಮೀಪದ ಬೆಳ್ಳೆಣ್ಣೆ ಎಂಬಲ್ಲಿ ನಡೆದಿದೆ.
ತಾಳಗುಪ್ಪದ ರಂಗನಾಥ ಕಾಲೋನಿ ನಿವಾಸಿಯಾದ ಮಾಜಿ ಎಪಿಎಂಸಿ ನಾಮ ನಿರ್ದೇಶಿತ ಸದಸ್ಯರಾದ ಚಂದ್ರಶೇಖರ (೫೮) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅಗ್ನಿಶಾಮಕ ದಳ ಹಾಗೂ ಸ್ಥಳಿಯರು ನೀರಿನಿಂದ ಶವ ಹೊರತೆಗೆದಿದ್ದಾರೆ.
ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


