Headlines

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ  10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೋ ಪ್ರಕರಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ.ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ
ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ. ಧರ್ಮಸ್ಥಳ ಪರ ರರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.

Leave a Reply

Your email address will not be published. Required fields are marked *