ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು

ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ  ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ‌ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ‌ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ.

ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು‌. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು ಡಿಎಸ್ಬಿ ಬ್ರಾಂಚ್ ಗೆ ವರದಿ ಮಾಡಿಕೊಳ್ಳುವಂತೆ  ಚಂದ್ರಕಲಾಗೆ ಸೂಚಿಸಿದ್ದರು.

ಇದೇ ವೇಳೆ ಸೂಕ್ತ ಶಿಸ್ತು ಕ್ರಮಕ್ಕೂ ಸಹ ಐಜಿಪಿಗೆ ಶಿಫಾರಸು ಮಾಡಿದ್ದರು ಎಂದು ತಿಳಿದು ಬಂದಿದೆ. ಎಸ್ಪಿ ಶಿಫಾರಸಿನ ಹಿನ್ನೆಲೆಯಲ್ಲಿ ಚಂದ್ರಕಲಾರನ್ನು ಸೇವೆಯಿಂದ ಅಮಾನತುಗೊಳಿಸಿ ಐಜಿಪಿ‌ ಆದೇಶಿಸಿರುವುದಾಗಿ ತಿಳಿದು ಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

16 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

18 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 days ago