RIPPONPETE | ಏ.13 ರಂದು ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ

RIPPONPETE | ಏ.13 ರಂದು ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ

ರಿಪ್ಪನ್ ಪೇಟೆ : ಬ್ರಹ್ಮಶ್ರೀನಾರಾಯಣಗುರು ಧರ್ಮಪಾಲನಾ ಸಂಘ ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಮಹಿಳಾ ಘಟಕದವರು ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 13 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ರಿಪ್ಪನ್‌ಪೇಟೆಯ ರಾಮಮಂದಿರದಲ್ಲಿ  ವಿಶ್ವಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಬಿ.ಎಸ್.ಎನ್.ಡಿ.ಪಿ ಘಟಕದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ತಿಳಿಸಿದರು.

ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ಮತ್ತು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ  ಗೋಪಾಲಕೃಷ್ಣ ಬೇಳೂರು ಉದ್ಘಾಟಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಬಿ.ಎಸ್.ಎನ್.ಡಿ.ಪಿ ಘಟಕದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ವಹಿಸುವರು.

ವಿಶೇಷ ಆಹ್ವಾನಿತರಾಗಿ ಬಿ.ಎಸ್.ಎನ್.ಡಿ.ಪಿ. ಸಂಘಟನೆಯ ರಾಜ್ಯಾಧ್ಯಕ್ಷ ಸೈದಪ್ಪ ಕೆ.ಗುತ್ತೇದಾರ್ ಮತ್ತು ಪ್ರಧಾನ ಕಾರ್ಯದರ್ಶಿ ಕಾಂತರಾಜ್ ಆರ್ಯ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಬಿ.ಸ್ವಾಮಿರಾವ್, ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಸದಸ್ಯ ಬಂಡಿ ರಾಮಚಂದ್ರ, ಇನ್ನಿತರ ಹಲವರು ಭಾಗವಹಿಸುವರು.

ಇದೇ ಸಂದರ್ಭದಲ್ಲಿ ಸಾಧನೆಗೈದ ಗಣ್ಯರಾದ ಹೊಸನಗರ ತಾಲ್ಲೂಕು ಬಿಸಿಎಂ ಇಲಾಖೆಯ ಸಹಾಯಕ ನಿರ್ದೇಶಕಿ ಕು‌. ಕಲಾವತಿ, ರಾಷ್ಟ್ರ ಪ್ರಶಸ್ತಿ ವಿಜೇತ ಜಾನಪದ ಕಲಾವಿದೆ ಡಾ. ಜಯಲಕ್ಷ್ಮಿ ನಾರಾಯಣಪ್ಪ, ಸೂಲಗಿತ್ತಿ ರಿಪ್ಪನ್ ಪೇಟೆಯ  ಜಯಮ್ಮ, ಜಾನಪದ ಕಲಾವಿದ ಲಕ್ಷ್ಮಿ ರಾಮಪ್ಪ, ಕರಕುಶಲತೆಯಲ್ಲಿ ಅತಿ ಹೆಚ್ಚು ಪರಿಣಿತೆ ರತ್ನಮ್ಮ ಜನಾರ್ಧನ, ಈಡಿಗ ಜಾನಪದ ಕಲಾವಿದ ಲಕ್ಷ್ಮಿ ಬಂಗಾರಪ್ಪ ಈ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 hour ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

3 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

20 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

20 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

22 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago