ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ.
ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.
ಘಟನೆಯ ಹಿನ್ನಲೆ :
ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಕಂಡು ಆತನ ಬಳಿ ಹೋಗಿ ಆತನನ್ನು ವಿಚಾರಿಸಿದ್ದಾರೆ.
ಈ ಸಮಯದಲ್ಲಿ ಆರೋಪಿಯ ಮಾತು ತೊದಲುತ್ತಿದ್ದು, ಬಾಯಿಯಿಂದ ಅಮಲು ಪದಾರ್ಥ ಸೇದಿದ ವಾಸನೆ ಬರುತ್ತಿದ್ದರಿಂದ, ಆತನನ್ನು ಕೂಲಂಕುಷವಾಗಿ ವಿಚಾರಸಿದಾಗ ಆತನು ಬೀಡಿ ಜೊತೆ ಗಾಂಜಾ ಸೇರಿಸಿ ಸೇದಿದ ಬಗ್ಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಕೂಡಲೇ ಆತನನ್ನು ವೈದ್ಯಕೀಯ ತಪಾಸಣೆ ನಡೆಸಿದಾಗ ಆತನು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದಕೀಯ ಪರೀಕ್ಷೆಯಿಂದ ದೃಡಪಟ್ಟಿರುವುದರಿಂದ ಈತನ ವಿರುದ್ಧ ಮಾದಕ ದ್ರವ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…