Breaking
12 Jan 2026, Mon

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್

112 police nab two thieves who snatched mobile phones and ran

112 police nab two thieves who snatched mobile phones and ran away

ಮೊಬೈಲ್ ಕಿತ್ತುಕೊಂಡು ಓಡಿದ್ದ ತಾಲೂಕಿನ ಯುವಕರಿಬ್ಬರನ್ನು ನ್ಯಾಮತಿ ಪೊಲೀಸರು  ಬಂಧಿಸಿರುವ ಘಟನೆ ನಡೆದಿದೆ.

ನ್ಯಾಮತಿ ತಾಲೂಕಿನ ಕಲಬ್ಗಿರಿ ರಂಗನಾಥ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರ ಮೊಬೈಲ್​ ಕಸಿದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ತಕ್ಷಣವೇ ಅವರು ಇನ್ನೊಬ್ಬ ವ್ಯಕ್ತಿಯ ಸಹಾಯದಿಂದ 112 ಪೊಲೀಸರಿಗೆ ಕರೆ ಮಾಡಿ ತಮ್ಮ ಮೊಬೈಲ್ ಕಸಿದುಕೊಂಡು ಹೋಗಿರುವ ಬಗ್ಗೆ  ದೂರು ಕೊಟ್ಟಿದ್ದರು.

ವಿಷಯ ತಿಳಿದ ಪೊಲೀಸರು ಆರೋಪಿಗಳ ಜಾಡು ಹಿಡಿಯಲು ಆರಂಭಿಸಿದ್ದರು. ಟವರ್ ಲೊಕೆಷನ್ ಹಾಗೂ ಸ್ಥಳೀಯರ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳಿಬ್ಬರನ್ನು ಹಿಡಿದಿದ್ದಾರೆ.

ಘಟನೆ ನಡೆದು ಕೆಲವೇ ಹೊತ್ತಿನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.. ಈ ಇಬ್ಬರು ಆರೋಪಿಗಳು ಶಿವಮೊಗ್ಗದ ಜಕಾತಿಕೊಪ್ಪದವರು ಎನ್ನಲಾಗಿದೆ.  ಪೊಲೀಸರು ಆರೋಪಿಗಳಿಬ್ಬರ ಹಿನ್ನೆಲೆಯ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *