ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು. ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ ಅವರ ನೇತೃತ್ವದಲ್ಲಿ ಸರ್ಪವನ್ನು ಹುಡುಕಿ ಹಿಡಿದು ಅದರ ಸ್ವಾಭಾವಿಕ ವಾಸಸ್ಥಾನಕ್ಕೆ ಬಿಡಲಾಯಿತು.
ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸಂತೋಷ್ ಜಿ. ಮಲ್ಲನಗೌಡ್ ಮತ್ತು ಅರಣ್ಯ ಸಿಬ್ಬಂದಿ ಭಾಗವಹಿಸಿದ್ದರು.
ಕಾಳಿಂಗ ಸರ್ಪ ವಿಷಪೂರಿತ ಹಾವುಗಳಲ್ಲಿ ಅತಿ ಉದ್ದವಾದ ಪ್ರಭೇದವಾಗಿದೆ. ಇದು 18 ಅಡಿ ವರೆಗೆ ಬೆಳೆಯುವ ಈ ಹಾವು ಇತರೆ ಹಾವುಗಳು, ಹಲ್ಲಿ ಮತ್ತು ಸಣ್ಣ ಕ್ರಿಮಿಕೀಟಗಳನ್ನು ತಿನ್ನುತ್ತದೆ. ಇದು ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಕಾಡುಗಳಲ್ಲಿ ಕಂಡುಬರುತ್ತದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್