BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ
ಬಂಕಾಪುರ ಪಟ್ಟಣದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣ ಕಳ್ಳತನ ಪ್ರಕರಣದಲ್ಲಿ ಬಂಕಾಪುರ ಪಿಎಸೈ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಕಲಬುರಗಿ ಮೂಲದ ಇಬ್ಬರನ್ನು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿ, 1.65 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳ್ಳತನ ಆರೋಪದಲ್ಲಿ ಬಂಧಿತರನ್ನು ಕಲಬುರಗಿ ಜಿಲ್ಲೆಯ ರಾಮತೀರ್ಥ ಗ್ರಾಮದ ನಿವಾಸಿಗಳಾದ 42 ವರ್ಷದ ಕಸ್ತೂರಿ, 20 ವರ್ಷದ ವೆನಿಲಾ @ ಚರಣ್ ಎಂಬುವವರನ್ನು ಬಂಧಿಸಲಾಗಿದೆ.
ಬಂಧಿತರು ಬಂಕಾಪುರ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣಗಳನ್ನು ಕಳ್ಳತನ ಮಾಡುತ್ತಿದ್ದರು.19-04-2025 ರಂದು ಬಂಕಾಪುರ ಪಟ್ಟಣದ ಶಹಾಬಾನು ಎಂಬುವವರ ನೆಕ್ಲೇಸ್ ಬಸ್ ನಿಲ್ದಾಣದಲ್ಲಿ ಕಳ್ಳತನವಾಗಿತ್ತು ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಎಸ್ ಪಿ ಅಂಶುಕುಮಾರ್ , ಹೆಚ್ಚುವರಿ ಎಸ್ ಪಿ ಎಲ್ ವೈ ಶಿರಕೊಳ , ಡಿ ಎಸ್ ಪಿ ಗುರುಶಾಂತಪ್ಪ ಸಿಪಿಐ ಅನಿಲ್ ರಾಠೊಡ ಮಾರ್ಗದರ್ಶನದಲ್ಲಿ ಬಂಕಾಪುರ ಪಿಎಸೈ ನಿಂಗರಾಜ್ ಕೆ ವೈ ಹಾಗೂ ಪಿಎಸೈ-2 ಎಸ್ ಎಮ್ ವನಹಳ್ಳಿ ನೇತ್ರತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.
ಪೊಲೀಸರ ತನಿಖಾ ತಂಡ ಅಂತರ ಜಿಲ್ಲಾ ಇಬ್ಬರು ಕಳ್ಳರನ್ನು ಬಂಧಿಸಿ, 1.65 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಐ ಕೆ ರಜನಿ , ಎಂ ಕೆ ನದಾಪ್ ,ವೆಂಕಟೇಶ್ ಲಮಾಣಿ ,ಬೀರಪ್ಪ ಕಳ್ಳಮನಿ , ನಿಂಗಪಪ್ ಪೂಜಾರ ,ಕಮಲಾಕ್ಷಿ ಅಲಗೋಡ ,ಶಿಲ್ಪಾ ಕ್ಯಾಶನಕೇರಿ ,ನೇತ್ರಾ ಚವಡಿ ಹಾಗೂ ಮಾರುತಿ ಇದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply