ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.
ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್ಐ ಗುಂಡು ಹಾರಿಸಿದ್ದಾರೆ.
ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು ಹೋದಾಗ ಪೊಲೀಸ್ ಸಿಬ್ಬಂದಿ ಹನುಮಂತ ಅಮಾಥಿ ಮೇಲೆ ಚಾಕುವಿನ ಹಲ್ಲೆ ನಡೆಸಿದ್ದಾನೆ. ಈ ಸಂಧರ್ಭದಲ್ಲಿ ಆತ್ಮರಕ್ಷಣೆಗಾಗಿ ಹೊಸಮನೆ ಪಿಎಸೈ ಕೃಷ್ಣಕುಮಾರ್ ಪಿ ಮಾನೆ ಆರೋಪಿ ಅರುಣ್ ಕುಮಾರ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಕಳೆದ ರಾತ್ರಿ ಕ್ರಿಕೆಟ್ ವಿಚಾರವಾಗಿ ನಡೆದ ಜಗಳದಲ್ಲಿ ಅರುಣ್ ಎಂಬಾತನ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಅರುಣ್ ಕುಮಾರ್ ಆರೋಪಿಯಾಗಿದ್ದ.
ಗಾಯಗೊಂಡ ಕೊಲೆ ಆರೋಪಿಗೆ ಭದ್ರಾವತಿಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್