ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ

ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾoಗಿಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ, ಮೊರಾರ್ಜಿ ಶಾಲೆಗಳು ಮಾದರಿಯಾಗಿದೆ. ಈ ಶಾಲೆಗಳಲ್ಲಿ ಓದುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಇದ್ದೆ ಇರುತ್ತದೆ. ನವೋದಯ ಪರೀಕ್ಷೆಯಲ್ಲಿ ತೇರ್ಗಡೆ ಆಗಲು ಮಕ್ಕಳಿಗೆ ಉತ್ತಮ ತರಬೇತಿ ಮತ್ತು ಪರಿಶ್ರಮ ಮುಖ್ಯ. ಈ ನಿಟ್ಟಿನಲ್ಲಿ ಸತತವಾಗಿ ಕಳೆದ ನಾಲ್ಕು ವರ್ಷಗಳಿಂದ ಹುಂಚ ಗ್ರಾಮವ್ಯಾಪ್ತಿಯ ಮಕ್ಕಳಿಗೆ ಉಚಿತವಾಗಿ ನವೋದಯ ಪರೀಕ್ಷೆಗೆ ಅಣಿಗೋಳಿಸುವ ಸಂಸ್ಥೆಯ ಕಾರ್ಯವನ್ನು ಶ್ಲಾಗಿಸಿ, ಮಕ್ಕಳನ್ನು ಮತ್ತು ಪೋಷಕರನ್ನು ಅಭಿನಂದಿಸಿದರು”.

ಈ ಶಿಬಿರದ ಸಂಸ್ಥಾಪಕರಾದ, ಹಳೆ ನವೋದಯ ವಿದ್ಯಾರ್ಥಿಯಾದ ಪ್ರಕಾಶ್ ಜೋಯ್ಸ್ ಶಿಬಿರದ ಮಕ್ಕಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ – “
ಈ ಶಿಬಿರ, ಕರ್ನಾಟಕ ರಾಜ್ಯದಲ್ಲಿ ಮೊದಲ ನೂತನ ಪ್ರಯೋಗವಾಗಿದ್ದು, ಉತ್ತಮ ಶಿಕ್ಷಣ ಬಯಸುವ ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಸಿಗುವ ಸೌಲಭ್ಯ ಕಲ್ಪಿಸುವ ಒಂದು ವೇದಿಕೆ. ಈ ಯಶಸ್ಸಿಗೆ ಕಾರಣಕರ್ತರಾದ ಶಿಬಿರದ ಶಿಕ್ಷಕ ವೃಂದಕ್ಕೆ, ಸಂಚಾಲಕರಿಗೆ ಮತ್ತು ಮಕ್ಕಳಿಗೆ ಶುಭಾಶಯಗಳನ್ನು” ತಿಳಿಸಿದರು.

ಹಳೆ ನವೋದಯ ವಿದ್ಯಾರ್ಥಿಗಳ ಮಿಲನ ಅಸೋಸಿಯೇಷನ್ ಮತ್ತು ಹುಂಚ ಯುವ ಬಳಗದ ಸಂಸ್ಥೆ – ನವೋದಯ ಮತ್ತು ಮೊರಾರ್ಜಿ ಶಿಬಿರ… 2021ರಲ್ಲಿ ಪ್ರಾರಂಭಗೊಂಡು ಇದೀಗ ಉಜ್ವಲ ಯಶಸ್ಸಿನ ಹಾದಿಯಲ್ಲಿದೆ. ಪ್ರಸಕ್ತ ವರ್ಷದಲ್ಲಿ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳ 22ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ 70 ವಿದ್ಯಾರ್ಥಿಗಳು ಶಿಬಿರದಲ್ಲಿ ತೀವ್ರ ತರಬೇತಿ ಪಡೆದು ಅತ್ಯುತ್ತಮ ಪ್ರಗತಿ ಸಾಧಿಸಿದ್ದಾರೆ. ಈ ಶಿಬಿರದಲ್ಲಿ ಪ್ರತಿ ವರ್ಷ 4-5 ತಿಂಗಳು  ಪರೀಕ್ಷೆಗೆ ದಾಖಲಿಸಿದ ವಿದ್ಯಾರ್ಥಿಗಳಿಗೆ ನವೋದಯ ಮತ್ತು ಮೊರಾರ್ಜಿ ಶಾಲೆಯ ಪರಿಚಯ, ಆಯ್ಕೆ ಪ್ರಕ್ರಿಯೆ ಮಾಹಿತಿ, ಕೋಚಿಂಗ್, ಮಾದರಿ ಪರೀಕ್ಷೆ, ಕಲಿಕಾ ಸಾಮಗ್ರಿಗಳು, ಸಮಯ ನಿರ್ವಹಣೆ ಮತ್ತು ಇತರೆ ಉಪಯುಕ್ತ ಮಾಹಿತಿಗಳನ್ನು ಕೊಡಲಾಗುತ್ತದೆ.

ಪ್ರಸಕ್ತ ವರ್ಷದ ನವೋದಯ ಅರ್ಹತಾ ಪರೀಕ್ಷೆಯಲ್ಲಿ ಈ ಶಿಬಿರದಿಂದ 6ನೇ ತರಗತಿಗೆ 3 ಮಕ್ಕಳು, ಏಕಲವ್ಯ ಶಾಲೆಗೆ 2 ಮಕ್ಕಳು ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 9 ಮಕ್ಕಳು ಅರ್ಹತೆಯನ್ನು ಪಡೆದಿರುವುದು ವಿಶೇಷ ಸಾಧನೆಯಾಗಿದೆ.

ಸೆಪ್ಟೆಂಬರ್ ನಿಂದ..ಜನವರಿ ತನಕ ನಾಲ್ಕು ತಿಂಗಳ ಕಾಲ, ಪ್ರತಿ ಭಾನುವಾರ ತರಗತಿ ಜೊತೆಗೆ ಆನ್ಲೈನ್ ಪರೀಕ್ಷೆಗಳು, ಪ್ರೇರಣಾತ್ಮಕ ತರಗತಿಗಳು, ಕ್ವಿಜ್ ಸ್ಪರ್ಧೆಗಳು, ಹಾಗೂ ಪಿಎಂ ಶ್ರೀ- ಜವಾಹರ್ ನವೋದಯ ವಿದ್ಯಾಲಯ ಶಿವಮೊಗ್ಗ ಭೇಟಿ ಮಕ್ಕಳ ಈ ಸಾಧನೆಗೆ ಪೂರಕ ಆಗಿದೆ.

ಶಿಬಿರದ ವಿದ್ಯಾರ್ಥಿಗಳಾದ ಶರಣ್, ಸಂಯಮ್, ಸನ್ನಿಧಿ ಎಸ್ ರಾವ್ – ಶಿವಮೊಗ್ಗ ಜಿಲ್ಲೆಯ ಗಾಜನೂರಿನ ನವೋದಯ ಶಾಲೆಗೆ ಅಯ್ಕೆಯಾಗಿದ್ದಾರೆ.. ಪ್ರಥಮ ಬಾರಿಗೆ ಚಿಕ್ಕಮಗಳೂರು ಏಕಲವ್ಯ ಶಾಲೆಗೆ (ಸಿಬಿಎಸ್ಇ) ಆರ್ಯ, ಶ್ರುತಿ ಎಸ್ ಆಯ್ಕೆ ಆಗಿದ್ದಾರೆ. ಹಾಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆರಾಧ್ಯ, ವಿನ್ಯಾಸ್, ಗಗನ್, ದಿಶಾಂತ್, ಕೃಪಾಶ್ರೀ, ಶ್ರೇಣಿಕ್, ಶ್ರುತಿ, ಸನ್ನಿಧಿ, ನಿಶಾಂತ್ ಮೊದಲ ಪಟ್ಟಿಯಲ್ಲಿ ತೇರ್ಗಡೆ ಆಗಿದ್ದಾರೆ. ಈ ಫಲಿತಾಂಶ ಮಲೆನಾಡಿನ ಭಾಗದ ಮಕ್ಕಳಲ್ಲಿ ಹೊಸ ಚೈತನ್ಯ ಮೂಡಿಸಿದೆ.

ಪ್ರಸಕ್ತ ವರ್ಷದಲ್ಲಿ ಈ ಸಂಸ್ಥೆ ಹುಂಚ, ಕೋಣಂದೂರು ಮತ್ತು ಶಿಕಾರಿಪುರದ ನೆಲವಾಗಿಲು ಗ್ರಾಮಗಳಲ್ಲೂ ಕಾರ್ಯ ನಡೆಸುತ್ತಿದೆ. ಈ ವರ್ಷದ ಶಿಬಿರದಲ್ಲಿ ಒಟ್ಟು 150 ಹೆಚ್ಚು ಮಕ್ಕಳು ಭಾಗವಹಿಸಿದ್ದು, ಹುಂಚದಿಂದ 3 ಮಕ್ಕಳು ಮತ್ತು ನೆಲವಾಗಿಲು ಶಿಬಿರದಿಂದ 3 ಮಕ್ಕಳು ನವೋದಯಕ್ಕೆ ತೇರ್ಗಡೆ ಆಗಿದ್ದಾರೆ..

ಈ ಸಂಸ್ಥೆಯಿಂದ ಕಳೆದ ನಾಲ್ಕು ವರ್ಷಗಳಿಂದ.. ಒಟ್ಟು 12 ಮಕ್ಕಳು ನವೋದಯ ಶಾಲೆಗೆ, 2 ಮಕ್ಕಳು ಏಕಲವ್ಯ ಶಾಲೆಗೆ ಮತ್ತು 69 ಮಕ್ಕಳು ಮೊರಾರ್ಜಿ ವಸತಿ ಶಾಲೆಗಳಿಗೆ ತೇರ್ಗಡೆ ಆಗಿರುತ್ತಾರೆ. ಖುಷಿಯಾದ ವಿಚಾರ ಏನಂದರೆ… ಈ ಸಂಸ್ಥೆಯಿಂದ ಗ್ರಾಮೀಣ ಭಾಗದ ಮಕ್ಕಳು 2.1 ಕೋಟಿ ರೂಪಾಯಿ ಮೌಲ್ಯದ ಶೈಕ್ಷಣಿಕ ಉಪಯೋಗ, ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ  ಪಡೆದುಕೊಂಡಿದ್ದಾರೆ. ಇಲ್ಲಿಯವರೆಗೆ ಈ ಸಂಸ್ಥೆ ಇಂದ 359 ಮಕ್ಕಳು ಉಚಿತ
ತರಬೇತಿ ತೆಗೆದುಕೊಂಡು ತಮ್ಮ ಜ್ಞಾನ ಅಭಿರುದ್ದಿ ಮಾಡಿಕೊಂಡಿದ್ದಾರೆ..

ನವೋದಯ ಮತ್ತು ಮೊರಾರ್ಜಿ ಶಾಲೆಯ ಪರೀಕ್ಷೆಯ ಬಗ್ಗೆ ಮಾಹಿತಿಗಾಗಿ ಸಂಪರ್ಕಿಸಿ – ಪ್ರಕಾಶ್ ಜೋಯ್ಸ್ – ಸಂಸ್ಥಾಪಕರು – ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ, ನವೋದಯ ರತ್ನ ಪ್ರಶಸ್ತಿ ವಿಜೇತ, ಸೀನಿಯರ್ ಮ್ಯಾನೇಜರ್ – ಕಾಗ್ನಿಜಂಟ್ ಬೆಂಗಳೂರು – 9980463013

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago