ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ(ರಿ) ಹಾಗೂ ಸ್ತ್ರೀಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಯನೂರು ಇವರ ಸಹಯೋಗದಲ್ಲಿ ಒಕ್ಕೂಟ ವ್ಯಾಪ್ತಿಯ ಸಂಘಗಳ ಸದಸ್ಯರ ಹುಟ್ಟುಹಬ್ಬದ ಪ್ರಯುಕ್ತ ಆಯನೂರು ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗಾಗಿ ಚೈತನ್ಯ ಅನ್ನ ಕಾರ್ಯಕ್ರಮವನ್ನು ನಡೆಸಲಾಯಿತು.
ಆಯನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಗಂಗಾ ನಾಯ್ಕ ಮಾತನಾಡಿ, ಹಸಿದವರಿಗಾಗಿ ಅನ್ನ ಕಾರ್ಯಕ್ರಮ ಏರ್ಪಡಿಸಿರುವುದು ವಿನೂತನ ಕಾರ್ಯಕ್ರಮವಾಗಿದೆ. ಬಡಮಹಿಳೆಯರು ಇಂಥ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷವಾಗಿದೆ. ಪ್ರತಿಯೊಬ್ಬರೂ ತಮ್ಮ ತಮ್ಮ ಹುಟ್ಟುಹಬ್ಬದ ದಿನದಂದು ಅನಗತ್ಯ ಖರ್ಚುಮಾಡದೇ ಹಸಿದವರಿಗೆ ಒಂದು ದಿನ ಅನ್ನ ನೀಡುವುದರ ಮೂಲಕ ಆಚರಣೆ ಮಾಡುತ್ತಿರುವ ಈ ಕಾರ್ಯಕ್ರಮ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದರು.
ಸಂಸ್ಥೆಯ ನಿರ್ದೇಶಕ ಫಾದರ್ ಪಿಯುಸ್ ಡಿಸೋಜಾ ಮಾತನಾಡಿ, ದಾನಗಳಲ್ಲಿ ಶ್ರೇಷ್ಟವಾದ ದಾನ ಎಂದರೆ ಅನ್ನದಾನ. ಹಸಿದವರಿಗೆ ಮುಖ್ಯವಾಗಿ ಬೇಕಾಗಿರುವುದು ಅನ್ನ. ಯಾವುದೇ ಜಾತಿ, ಮತ, ವರ್ಣ, ಧರ್ಮ ಬೇಧವಿಲ್ಲದೆ ಅನ್ನದಾನ ಮಾಡುವುದು ಪುಣ್ಯದ ಕೆಲಸವಾಗಿದೆ ಎಂದರು. ಈ ದಿನ ಆಯನೂರು ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳು ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಒಕ್ಕೂಟದ ಅಧ್ಯಕ್ಷೆ ಶಗುಫ್ತಾ ಖಾನ್ ಹಾಗೂ ಒಕ್ಕೂಟದ ಪ್ರತಿನಿಧಿಗಳು, ಪದಾಧಿಕಾರಿಗಳು ಮತ್ತು ಸಂಘಗಳ ಸ್ವಯಂ ಸೇವಕರು ಹಾಜರಿದ್ದರು ಹಾಗೂ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕರು, ಕಾರ್ಯಕರ್ತರು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್