ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ

ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಂತೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರ ಪ್ರಕ್ರಿಯೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೌಕರರ ಪರವಾಗಿ ಮನವಿ ಸಲ್ಲಿಸುವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಹೀಲಿಯಂ ಅನಿಲ ತುಂಬಿದ ಬೃಹತ್ ಬಲೂನು ಹಾರಿಸುವ ಮೂಲಕ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ರೂಪಿಸಿದ್ದ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈಗಿನ ಹೊಸ ಪಿಂಚಣಿ ವ್ಯವಸ್ಥೆ (ಎನ್ ಪಿಎಸ್) ಬದಲಿಗೆ ಒಪಿಎಸ್ ಜಾರಿಗೊಳಿಸುವ ಭರವಸೆ ನೀಡಲಾಗಿತ್ತು. ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಎಲ್ಲ ಕಾರ್ಯಕ್ರಮಗಳನ್ನು ಸರ್ಕಾರ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುತ್ತಿದೆ. ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷನಾಗಿದ್ದ ನನಗೂ ಒಪಿಎಸ್ ಜಾರಿ ವಿಚಾರದಲ್ಲಿ ಹೊಣೆಗಾರಿಕೆ ಇದೆ. ಮುಖ್ಯಮಂತ್ರಿ ಅವರಿಗೆ ನಿಮ್ಮ (ಸರ್ಕಾರಿ ನೌಕರರ) ಪರವಾಗಿ ಮನವಿ ಮಾಡುವೆ ಎಂದರು.

ಈ ವೇಳೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ್ ಹಾಜರಿದ್ದರು.

ಹವಾಮಾನ ವೈಪರಿತ್ಯ, ಸಿಎಂ ಗೈರು: ಶಿವಮೊಗ್ಗದಲ್ಲಿ ಮಳೆ ಆಗುತ್ತಿದ್ದು, ಹವಾಮಾನ ವೈಪರಿತ್ಯದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿವಮೊಗ್ಗ ಪ್ರವಾಸವನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಂಜೆ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಬೇಕಿತ್ತು. ಜೊತೆಗೆ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಸಿಎಂ ಹಾಗೂ ಸಚಿವರ ಗೈರು ಹಾಜರಿಯಲ್ಲಿಯೇ ಕಾರ್ಯಕ್ರಮ ಆರಂಭಗೊಂಡಿವೆ.

ಮೇ 20ರವರೆಗೆ ಮೂರು ದಿನ ನಡೆಯುವ ಸರ್ಕಾರಿ ನೌಕರರ. ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ 15 ಸಾವಿರ ನೌಕರರು ಪಾಲ್ಗೊಳ್ಳಲಿದ್ದು, ನೋಂದಣಿ ಕಾರ್ಯ ಬೆಳಿಗ್ಗೆಯಿಂದಲೇ ಆರಂಭವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

22 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

22 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 days ago