ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್
ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡುವಂತೆ ಸೂಚನೆ ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಅಲ್ಲದೇ ನಿನ್ನೆ ಬೆಂಗಳೂರಲ್ಲಿ ಕೊರೊನ ಸೊಂಕಿಗೆ ವೃದ್ಧರೊಬ್ಬರರು ಬಲಿಯಾಗಿದ್ದಾರೆ.
ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆಯಿಂದ ದಾಖಲಾಗಿರುವ ರೋಗಿಗಳಿಂದ ಆಸ್ಪತ್ರೆ ಸಿಬ್ಬಂದಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಬೇಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಿ. ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಪಾಲಿಸಿ, ಮುಂಜಾಗ್ರತೆ ವಹಿಸಿದರೆ ಸಾಕು ಎಂದು ಸಲಹೆ ನೀಡಿದ್ದಾರೆ.
ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ. ಸಲಹಾ ಸಮಿತಿ ಸೂಚನೆ ಮೇರೆಗೆ ರವಿವಾರ (ಮೇ.25) ದಿಂದ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ಮತ್ತೆ ಆರಂಭಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿಯೇ ಹೆಚ್ಚು ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…