POSTMAN NEWS

ನೈಜ ಸುದ್ದಿ ನೇರ ಬಿತ್ತರ..

RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ

GridArt 20250524 201847150 wm.jpg

RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ

ರಿಪ್ಪನ್ ಪೇಟೆ : ಸಾಲಭಾದೆಗೆ ಬೇಸತ್ತು ರೈತನೊಬ್ಬ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ.

ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಕೃಷಿ ಕೆಲಸಕ್ಕಾಗಿ ಹರತಾಳು ಕೃಷಿ ಪತ್ತಿನ ಸಹಕಾರ ಸಂಘದಿಂದ 1ಲಕ್ಷದ 90 ಸಾವಿರ ಹಾಗೂ ಕೃಷಿ ಕಾರ್ಯಕ್ಕಾಗಿ ಶಿವಮೊಗ್ಗದ ಅದಾನಿ ಫೈನಾನ್ಸ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು ಆದರೆ ಸರಿಯಾದ ಬೆಳೆ ಬಾರದೇ ಸಾಲ ಕಟ್ಟಲು ಆಗದೇ ಕಳೆ ಬೇಸತ್ತಿದ್ದರು. ಇಂದು ಬೆಳಿಗ್ಗೆ 6 ಗಂಟೆಯಿಂದ ಮನೆ ಪಕ್ಕದಲ್ಲಿರುವ ಹಳೆ ಮನೆಯಲ್ಲಿ ಕಳೆನಾಶಕ ಸೇವಿಸಿದ್ದಾರೆ ಕೂಡಲೇ ಅವರನ್ನು ಆನಂದಪುರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗದ್ ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ ಆದರೆ ಚಿಕಿತ್ಸೆ ಫಲಿಸದೇ ಇಂದು 11.30 ಕ್ಕೆ ಮೃತಪಟ್ಟಿದ್ದಾರೆ.

ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.